ಉಪ್ಪಿನಂಗಡಿ ಮಾದರಿ ಶಾಲೆಯ ಹಿಂಬದಿಯ ಚರಂಡಿಯಲ್ಲಿ ತ್ಯಾಜ್ಯ-ಮಲಿನ ನೀರು : ಸಮಸ್ಯೆ ಪರಿಹರಿಸಲು ಸ್ಥಳೀಯರಿಂದ ಮತ್ತೊಮ್ಮೆ ಮನವಿ

0

ಪುತ್ತೂರು: ಉಪ್ಪಿನಂಗಡಿ ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಹಿಂಬದಿಯ ಚರಂಡಿಯಲ್ಲಿ ತ್ಯಾಜ್ಯ ಹಾಗೂ ಮಲಿನ ನೀರು ಸಾಗಿ ಹೋಗುವುದರಿಂದ ಉಂಟಾಗುತ್ತಿರುವ ಸಮಸ್ಯೆಯನ್ನು ಪರಿಹರಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಶಾಲೆಯ ಹಿಂಬದಿಯ ಚರಂಡಿಯಲ್ಲಿ ತ್ಯಾಜ್ಯ ಮತ್ತು ಮಲಿನ ನೀರು ನಿರ್ವಹಣೆಯ ಕೊರತೆಯಿಂದಾಗಿ ಸರಿಯಾಗಿ ಹರಿದು ಹೋಗದೆ ಅಲ್ಲಲ್ಲಿ ನೀರು ನಿಂತುಕೊಂಡು ಕಾಯಿಲೆಗಳ ಸಂತಾನಕ್ಕೆ ಕಾರಣವಾಗುತ್ತಿದೆ. ಇದರಿಂದ ಮಕ್ಕಳ ಆರೋಗ್ಯ ಅಪಾಯಕ್ಕೆ ಒಳಗಾಗಿರುವುದಲ್ಲದೆ, ಶಿಕ್ಷಕರಿಗೂ ತೊಂದರೆ ಉಂಟಾಗುತ್ತಿದೆ. ವಿಶೇಷವಾಗಿ ಡೆಂಗ್ಯು, ಮಲೇರಿಯಾ ಮುಂತಾದ ಮಾರಕ ರೋಗಗಳ ಹರಡುವ ಭೀತಿ ಹೆಚ್ಚಾಗಿದೆ. ಈ ಪರಿಸ್ಥಿತಿಯಿಂದ ಮಕ್ಕಳ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಈ ಕುರಿತು ಹಲವಾರು ಬಾರಿ ಸ್ಥಳೀಯ ಪ್ರಾಧಿಕಾರಗಳಿಗೆ ದೂರು ನೀಡಿದರೂ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಈ ಸಮಸ್ಯೆಗೆ ತ್ವರಿತವಾಗಿ ಶಾಶ್ವತ ಪರಿಹಾರ ಕಲ್ಪಿಸುವಂತೆ ಮಾನವ ಹಕ್ಕು ಆಯೋಗದ ಮೂಲಕ ಸರ್ಕಾರಕ್ಕೆ ಒತ್ತಾಯಿಸಲು ಮನವಿ ಸಲ್ಲಿಸಲಾಗಿದೆ.


ಶಾಲಾ ಹಿಂಭಾಗದ ಚರಂಡಿಯ ಸ್ವಚ್ಛತೆ ಮತ್ತು ನೀರು ಸರಿಯಾಗಿ ಹರಿಯುವ ವ್ಯವಸ್ಥೆ ಕಲ್ಪಿಸಬೇಕು, ಆರೋಗ್ಯ ಇಲಾಖೆಯಿಂದ ಡೆಂಗ್ಯು ಮುಂತಾದ ರೋಗಗಳ ತಡೆಗಟ್ಟುವ ಉಪಾಯಗಳ ಬಗ್ಗೆ ತ್ವರಿತ ಕ್ರಮ ಕೈಗೊಳ್ಳಬೇಕು, ಸ್ಥಳೀಯ ಸ್ವಚ್ಛತಾ ಪ್ರಾಧಿಕಾರದಿಂದ ಈ ಪ್ರದೇಶವನ್ನು ನಿಯಮಿತವಾಗಿ ತಪಾಸಣೆ ಮಾಡಬೇಕು, ಮಕ್ಕಳ ಆರೋಗ್ಯವನ್ನು ಕಾಪಾಡಲು ತಕ್ಷಣವೇ ಪೂರಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು, ಮಕ್ಕಳ ಭವಿಷ್ಯ ಹಾಗೂ ಆರೋಗ್ಯದ ದೃಷ್ಟಿಯಿಂದ ಈ ಮನವಿಗೆ ತಕ್ಷಣ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here