ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರನ್ನು ಭೇಟಿಯಾದ ಶಾಸಕಿ ಭಾಗೀರಥಿ ಮುರುಳ್ಯ – ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಕೋರಿಕೆ

0

ಪುತ್ತೂರು: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಬೆಂಗಳೂರಿನಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಕ್ಷೇತ್ರದ ವಿವಿಧ ಬೇಡಿಕೆಗಳಿಗೆ ಅನುದಾನ ಒದಗಿಸುವಂತೆ ಮನವಿ ಸಲ್ಲಿಸಿದರು.

ಈ ಹಿಂದೆ ಸಲ್ಲಿಸಿದ್ದ ಅನುದಾನ ಬೇಡಿಕೆಯ ಅರ್ಜಿಗಳ ಕುರಿತು ಉಪಮುಖ್ಯಮಂತ್ರಿಗಳಿಗೆ ಮತ್ತೊಮ್ಮೆ ನೆನಪಿಸಿ, ಅನುದಾನ ಶೀಘ್ರ ಬಿಡುಗಡೆ ಮಾಡುವಂತೆ ಶಾಸಕರು ವಿನಂತಿಸಿದರು. ಕಳೆದ ವರ್ಷ ಮೇ ತಿಂಗಳಲ್ಲಿ ಕಡಬ ತಾಲೂಕು ಕೆನ್ಯ ಗ್ರಾಮದ ಮಜ್ಜಾರು-ಕಡಾವು ಎಂಬಲ್ಲಿ ಕಿರು ಅಣೆಕಟ್ಟು ಮತ್ತು ಸೇತುವೆ ನಿರ್ಮಾಣಕ್ಕೆ ಮನವಿ ಸಲ್ಲಿಸಲಾಗಿತ್ತು. ಬಳಿಕ ವರಾಹಿ ಮತ್ತು ಬೃಹತ್ ನೀರಾವರಿ ಯೋಜನೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಯೋಜನೆ ತಯಾರಿಸಿದ್ದರೂ, ಯೋಜನೆ ಮುಂದುವರಿಯದೆ ಉಳಿದಿರುವ ಬಗ್ಗೆ ಡಿಸಿಎಂ ಗಮನಕ್ಕೆ ತಂದರು. ಅದೇ ರೀತಿ, ಈಗಾಗಲೇ ಅನುದಾನ ಮಂಜೂರಾಗಿರುವ ಆಲೆಟ್ಟಿ ಗ್ರಾಮದ ಕುಕ್ಕುಂಬಳ ಸೇತುವೆ ಕಾಮಗಾರಿ ಇನ್ನೂ ಟೆಂಡರ್ ಹಂತದಲ್ಲಿದ್ದು, ಪ್ರಕ್ರಿಯೆಗಳನ್ನು ಶೀಘ್ರ ಮುಗಿಸಿ ಕೆಲಸ ಆರಂಭಿಸುವಂತೆ ಶಾಸಕರು ಮನವಿ ಮಾಡಿದರು.

ಶಾಸಕರ ಮನವಿಗೆ ಸ್ಪಂದಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತಕ್ಷಣವೇ KNLL ಅಧಿಕಾರಿಗಳಿಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

LEAVE A REPLY

Please enter your comment!
Please enter your name here