ರಸ್ತೆ ಕಾಂಕ್ರಿಟೀಕರಣಕ್ಕೆ ಅನುದಾನ ಮಂಜೂರಾತಿಗಾಗಿ ಸಚಿವ ಝಮೀರ್ ಅಹಮ್ಮದ್‌ರಿಗೆ ಮನವಿ

0

ನೆಲ್ಯಾಡಿ: ಸುಳ್ಯ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತೀರಾ ನಾದುರಸ್ಥಿಯಲ್ಲಿದ್ದು, ನಡೆದಾಡುವುದಕ್ಕೂ ಸಾಧ್ಯವಿಲ್ಲದ ರೀತಿಯಲ್ಲಿ ಕುಲಗೆಟ್ಟಿರುವ ನೆಲ್ಯಾಡಿ, ಕೌಕ್ರಾಡಿ, ಗೋಳಿತ್ತೊಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ 5 ರಸ್ತೆಗಳ ಕಾಂಕ್ರಿಟೀಕರಣಕ್ಕೆ ಅನುದಾನ ಮಂಜೂರು ಮಾಡುವಂತೆ ಕೋರಿ ಕೆಪಿಸಿಸಿ ಸಂಯೋಜಕ ಜಿ. ಕೃಷ್ಣಪ್ಪ ರಾಮಕುಂಜ ಅವರು ಅಲ್ಪಸಂಖ್ಯಾತ ಕಲ್ಯಾಣ ಇಲಾಖಾ ಸಚಿವರಾದ ಝಮೀರ್ ಅಹಮದ್‌ರಿಗೆ ಮನವಿ ಮಾಡಿದರು.


ನೆಲ್ಯಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಥನಿ ಪಡ್ಡಡ್ಕ ಅಡ್ಡರಸ್ತೆ ಕಾಂಕ್ರಿಟೀಕರಣಕ್ಕೆ ರೂ.25 ಲಕ್ಷ, ಪೊಸಳಿಕೆ ರಸ್ತೆ ಕಾಂಕ್ರಿಟೀಕರಣಕ್ಕೆ ರೂ. 25 ಲಕ್ಷ, ಕೌಕ್ರಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೌಡಸಾಗು ರಸ್ತೆ ಕಾಂಕ್ರಿಟೀಕರಣಕ್ಕೆ ರೂ.25 ಲಕ್ಷ, ಕಲ್ಲರಂಭ ರಸ್ತೆ ಕಾಂಕ್ರಿಟೀಕರಣಕ್ಕೆ ರೂ.25 ಲಕ್ಷ, ಗೋಳಿತ್ತೊಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಣಾಲು ಗ್ರಾಮದ ಕಾರ್ಯತ್ತಡ್ಕ ಬಸ್ತಿ ರಸ್ತೆ ಕಾಂಕ್ರಿಟೀಕರಣಕ್ಕೆ ರೂ.25 ಲಕ್ಷ ಅನುದಾನ ಮಂಜೂರು ಮಾಡುವಂತೆ ಸಚಿವರಿಗೆ ಮನವಿ ಸಲ್ಲಿಸಿದರು. ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ ಸಂದರ್ಭದಲ್ಲಿ ಕೃಷ್ಣಪ್ಪ ಅವರೊಂದಿಗೆ ಮುಖ್ಯಮಂತ್ರಿಗಳ ಸಾಮಾಜಿಕ ಜಾಲತಾಣ ವಿಭಾಗದ ಕಬೀರ್ ಆತೂರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here