






ಡಿವಿಎಸ್ ಹೆಸರು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ


ಪುತ್ತೂರು: ಕರ್ನಾಟಕದ ನಾಲ್ಕು ಸ್ಥಾನಗಳು ಸೇರಿದಂತೆ ಮುಂದಿನ ತಿಂಗಳು ತೆರವಾಗಲಿರುವ ರಾಜ್ಯಸಭೆಯ 24 ಸ್ಥಾನಗಳಿಗೆ ಜೂ.18ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಜೂ.8 ಕಡೆಯ ದಿನ. ನಾಮಪತ್ರ ವಾಪಸ್ ಪಡೆಯಲು ಜೂ.11 ಕಡೆಯ ದಿನವಾಗಿದ್ದು, ಜೂ.18ರಂದು ಮತದಾನ ನಡೆದು ಅಂದೇ ಫಲಿತಾಂಶ ಪ್ರಕಟಗೊಳ್ಳಲಿದೆ.



ಕರ್ನಾಟಕವನ್ನು ಪ್ರತಿನಿಧಿಸಿರುವ ಜೆಡಿಎಸ್ ವರಿಷ್ಠ,ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬೆಳಗಾವಿ ಬಿಜೆಪಿ ಮುಖಂಡ ಈರಣ್ಣ ಕಡಾಡಿ,ದಕ್ಷಿಣ ಕನ್ನಡ ಬಿಜೆಪಿ ಮುಖಂಡ ಕೆ.ನಾರಾಯಣ ಅವರ ರಾಜ್ಯಸಭೆಯ ಪ್ರಸಕ್ತ ಅವಧಿ ಜೂ.24ರಂದು ಕೊನೆಗೊಳ್ಳಲಿದೆ.
ಡಿ.ವಿ.ಸದಾನಂದ ಗೌಡರ ಹೆಸರು ಪ್ರಸ್ತಾಪ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ
ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಯಿಂದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವರೂ ಆಗಿರುವ ಡಿ.ವಿ.ಸದಾನಂದ ಗೌಡ ಅವರನ್ನು ಪರಿಗಣಿಸಬೇಕು ಎಂದು ಪಕ್ಷದ ವರಿಷ್ಠರಿಗೆ ಶಿ-ರಸು ಮಾಡುವ ಬಗ್ಗೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆದಿದೆ.ಕಳೆದ ಕೆಲವು ವರ್ಷಗಳಿಂದ ಯಾವುದೇ ಪ್ರಮುಖ ಹುದ್ದೆಯಿಲ್ಲದೆ ಇರುವ ಡಿ.ವಿ.ಸದಾನಂದ ಗೌಡರನ್ನು ರಾಜ್ಯಸಭೆಗೆ ಅಭ್ಯರ್ಥಿಯಾಗಿ ಪರಿಗಣಿಸುವಂತೆ ಪಕ್ಷದ ವರಿಷ್ಠರಿಗೆ ಶಿ-ರಸ್ಸು ಮಾಡಲು ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ವರದಿಯಾಗಿದೆ.ಪಕ್ಷದ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಶಿವಪ್ರಕಾಶ್, ರಾಜ್ಯ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್, ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ವಿಚಾರದ ಬಗ್ಗೆ ಚರ್ಚೆ ನಡೆಯಿತು.
ಹಲವು ಹುದ್ದೆಗಳನ್ನು ನಿಭಾಯಿಸಿದ್ದವರು: ಸದಾನಂದ ಗೌಡ ಅವರು ಅಂದಿನ ಜನ ಸಂಘದ ಸದಸ್ಯರಾಗಿ ತಮ್ಮ ರಾಜಕೀಯ ಜೀವನ ಆರಂಭಿಸಿದ್ದರು.ನಂತರ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಾಧ್ಯಕ್ಷರಾಗಿ, ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ, ದಕ್ಷಿಣ ಕನ್ನಡ ಬಿಜೆಪಿ ಉಪಾಧ್ಯಕ್ಷರಾಗಿ, ರಾಜ್ಯ ಬಿಜೆಪಿ ಯುವ ಮೋರ್ಚಾದ ಕಾರ್ಯದರ್ಶಿ, ರಾಜ್ಯ ಬಿಜೆಪಿ ಪಕ್ಷದ ಕಾರ್ಯದರ್ಶಿಯಾಗಿ ಪಕ್ಷದ ರಾಜ್ಯಾಧ್ಯಕ್ಷರಾಗಿ, ರಾಷ್ಟ್ರೀಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಎರಡು ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದ ಅವರು ಎರಡನೇ ಅವಽಯಲ್ಲಿ ರಾಜ್ಯ ವಿರೋಧ ಪಕ್ಷದ ಉಪನಾಯಕರಾದವರು. 2004ರಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪಽಸಿ ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾಗಿ ಎರಡನೇ ಅವಽಯಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದರಾಗಿ ಆಯ್ಕೆಯಾಗಿದ್ದರು.ಬಳಿಕದ ಅವಽಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಆಯ್ಕೆಯಾಗಿದ್ದರು. 2011ರಲ್ಲಿ 11 ತಿಂಗಳ ಅವಽಗೆ ರಾಜ್ಯದ ಮುಖ್ಯಮಂತ್ರಿಯಾಗಿ ಅಽಕಾರ ನಡೆಸಿದ್ದ ಡಿವಿಯವರು ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಸಂಪುಟದಲ್ಲಿ ರೈಲ್ವೇ,ಕಾನೂನು, ಅಂಕಿ-ಅಂಶ ಖಾತೆ ಹಾಗೂ ರಸಗೊಬ್ಬರ ಖಾತೆಯ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು.
2024ರ ಲೋಕಸಭಾ ಚುನಾವಣೆಯಲ್ಲಿ ಅವರಿಗೆ ಪಕ್ಷ ಟಿಕೆಟ್ ನಿರಾಕರಿಸಿತ್ತು.ಅವರು ಪ್ರತಿನಿಽಸುತ್ತಿದ್ದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ಅವರನ್ನು ಕಣಕ್ಕೆ ಇಳಿಸಲಾಗಿತ್ತು.ಪಕ್ಷದ ರಾಜ್ಯಾಧ್ಯಕ್ಷರಾಗಿ ದಕ್ಷಿಣ ಭಾರತದಲ್ಲಿ ಬಿಜೆಪಿ ಅಽಕಾರಕ್ಕೆ ಬರಲು ಕಾರಣಕರ್ತರಾಗಿದ್ದ ನಾಯಕರಲ್ಲಿ ಓರ್ವರಾಗಿ, ಮುಖ್ಯಮಂತ್ರಿಯಾಗಿ ಮತ್ತು ಕೇಂದ್ರ ಮಂತ್ರಿಯಾಗಿಯೂ ಕಾರ್ಯನಿರ್ವಹಿಸಿದ್ದ ಡಿ.ವಿ.ಸದಾನಂದ ಗೌಡರಿಗೆ ಸದ್ಯ ಪಕ್ಷದಲ್ಲಿ ಯಾವುದೇ ಉನ್ನತ ಸ್ಥಾನ-ಮಾನಗಳಿಲ್ಲ.ಈಗ ವಿಧಾನಸಭೆಯಿಂದ ರಾಜ್ಯಸಭೆಗೆ ನಾಲ್ಕು ಸ್ಥಾನಗಳನ್ನು ಆಯ್ಕೆ ಮಾಡಲು ಅವಕಾಶವಿದ್ದು, ಬಿಜೆಪಿಗೆ ಒಂದು ಸ್ಥಾನ ಸಿಗಲಿದೆ.ಆ ಸ್ಥಾನಕ್ಕೆ ಸದಾನಂದ ಗೌಡರನ್ನು ಪರಿಗಣಿಸಬೇಕು ಎಂದು ಹಲವು ನಾಯಕರು ಪ್ರಸ್ತಾಪ ಮಾಡಿದ್ದಾರೆ ಎನ್ನಲಾಗಿದೆ.
ದೇವೇಗೌಡ ಮತ್ತೊಂದು ಅವಽಗೆ ರಾಜ್ಯ ಸಭೆಗೆ ಪ್ರವೇಶ ಪಡೆಯುವರೇ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ವಿಧಾನಸಭೆಯಲ್ಲಿ ಶಾಸಕರ ಸಂಖ್ಯಾ ಬಲದ ಪ್ರಕಾರ, ತೆರವಾಗುವ ನಾಲ್ಕು ಸ್ಥಾನಗಳಲ್ಲಿ 3 ಸ್ಥಾನಗಳು ಕಾಂಗ್ರೆಸ್ಗೆ ಸಿಗಲಿವೆ.ಬಿ ಜೆಪಿಗೆ ಒಂದು ಸ್ಥಾನ ಸಿಗುವ ಸಾಧ್ಯತೆ ಇದೆ. ಕಳೆದ ಅವಽಯಲ್ಲಿ ಕಾಂಗ್ರೆಸ್ ಬೆಂಬಲದೊಂದಿಗೆ ದೇವೇಗೌಡರು ರಾಜ್ಯಸಭೆ ಪ್ರವೇಶಿಸಿದ್ದರು.ಬದಲಾದ ಕಾಲಘಟ್ಟದಲ್ಲಿ ದೇವೇಗೌಡ ನೇತೃತ್ವದ ಜೆಡಿಎಸ್-ಎನ್ಡಿಎ ಮೈತ್ರಿಕೂಟದಲ್ಲಿ ಗುರುತಿಸಿಕೊಂಡಿದೆ.ಅವರನ್ನು ಪುನರಾಯ್ಕೆ ಮಾಡುವಷ್ಟು ಸದಸ್ಯ ಬಲ ಜೆಡಿಎಸ್ನಲ್ಲಿ ಇಲ್ಲ.ದೇವೇಗೌಡರು ಮತ್ತೊಮ್ಮೆ ರಾಜ್ಯಸಭೆಗೆ ಚುನಾಯಿತರಾಗಬೇಕಾದಲ್ಲಿ ಅವರಿಗೆ ಬಿಜೆಪಿ ಬೆಂಬಲ ಅಗತ್ಯ.ಆದರೆ ದೇವೆಗೌಡರ ಬದಲು ಬಿಜೆಪಿ ಪಕ್ಷದವರಿಗೇ ಅವಕಾಶ ಕಲ್ಪಿಸಬೇಕೆಂಬ ಚರ್ಚೆ ರಾಜ್ಯ ಬಿಜೆಪಿಯಲ್ಲಿ ನಡೆದಿದೆ. ಬಿಜೆಪಿಯಿಂದಲೇ ಸ್ಪರ್ಧೆ ಮಾಡಿದರೆ ಡಿ.ವಿ.ಸದಾನಂದ ಗೌಡರಿಗೆ ಅವಕಾಶ ದೊರೆಯುವುದೇ ಅಥವಾ ಅಭ್ಯರ್ಥಿಯ ಅಚ್ಚರಿಯ ಆಯ್ಕೆ ನಡೆಯುವುದೇ ಎಂದು ಕಾದು ನೋಡಬೇಕಿದೆ.










