







ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿಯ ಹಿಂದಿ ವಿಭಾಗದ ಮುಖ್ಯಸ್ಥೆ ಡಾ.ದುರ್ಗಾರತ್ನ ಅವರು ಶ್ರವಣಬೆಳಗೊಳದ ರಾಷ್ಟ್ರೀಯ ಪ್ರಾಕೃತ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆಯು ನಡೆಸಿದ ಪ್ರಾಕೃತ ಪ್ರವೇಶ ಪರೀಕ್ಷೆಯಲ್ಲಿ ಆರನೇ ರ್ಯಾಂಕ್ ಗಳಿಸಿದ್ದಾರೆ.


ಇವರು ಬನ್ನೂರು ಗ್ರಾಮದ ನೆಕ್ಕಿಲ ನಿವಾಸಿ, ಕೃಷಿಕ ರವಿಶಂಕರ್ ಅವರ ಪತ್ನಿ.













