ಅಳಿಕೆ ಒಕ್ಕೂಟದ ತ್ರೈಮಾಸಿಕ ಸಭೆ: 39 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ಪ್ರವೀಣ್ ಸಣ್ಣಗುತ್ತು ನೂತನ ಅಧ್ಯಕ್ಷರಾಗಿ ಆಯ್ಕೆ

0

ಅಳಿಕೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಳಿಕೆ ವಲಯದ ಅಳಿಕೆ ಒಕ್ಕೂಟದ ತ್ರೈಮಾಸಿಕ ಸಭೆಯು ಸತ್ಯಸಾಯಿ ಲೋಕಸೇವಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸಭೆಯಲ್ಲಿ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ಸಣ್ಣಗುತ್ತು ಇವರ ಸಹಯೋಗದೊಂದಿಗೆ 39 ವಿದ್ಯಾರ್ಥಿಗಳಿಗೆ ಉಚಿತವಾಗಿ ಶಾಲಾ ಪುಸ್ತಕ ವಿತರಿಸಲಾಯಿತು.

ಪ್ರತಿವರ್ಷ ಉಚಿತ ಪುಸ್ತಕ ವಿತರಿಸುತ್ತಾ ಬಂದಿದ್ದು, ಇದರಿಂದ ಬಡ ಮಕ್ಕಳಿಗೆ ಹೆಚ್ಚಿನ ಅನುಕೂಲವಾಗಿದೆ. ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷ ರವೀಶ್, ಅಳಿಕೆ ವಲಯದ ಮೇಲ್ವಿಚಾರಕಿ ಮೀನಾಕ್ಷಿ, ಅಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು, ಶ್ರೀ ಸತ್ಯ ಸಾಯಿ ಲೋಕ ಸೇವಾ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕ ಶ್ರೀಧರ್ ಕೆ, ಕೃಷಿಕ ಮೋಹನ್ ಶೆಟ್ಟಿ, ಸೇವಾಪ್ರತಿನಿಧಿ ಚಂದ್ರಾವತಿ ಹಾಗೂ ಒಕ್ಕೂಟದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.ಸಭೆಯಲ್ಲಿ ಒಕ್ಕೂಟದ ನೂತನ ಪದಾಧಿಕಾರಿಗಳ ಬದಲಾವಣೆ ಮಾಡಲಾಗಿದ್ದು, ಒಕ್ಕೂಟದ ಅಧ್ಯಕ್ಷರಾಗಿ ಪ್ರವೀಣ್ ಸಣ್ಣಗುತ್ತು ಅವರನ್ನು ಆಯ್ಕೆ ಮಾಡಲಾಯಿತು.ಕಾರ್ಯಕ್ರಮವನ್ನು ಕವಿತ ನಿರ್ವಹಿಸಿದರು. ಪ್ರವೀಣ್ ಸಣ್ಣಗುತ್ತು ಸ್ವಾಗತಿಸಿದರೆ, ಮೇಲ್ವಿಚಾರಕಿ ಮೀನಾಕ್ಷಿ ವಂದಿಸಿದರು.

LEAVE A REPLY

Please enter your comment!
Please enter your name here