






ಕಾಣಿಯೂರು: ಬೊಬ್ಬೆಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ಶಾಲಾ ಮಟ್ಟದ ಶಾಲಾ ದಾಖಲಾತಿ ಆಂದೋಲನಕ್ಕೆ ಮೇ 27ರಂದು ಚಾಲನೆ ನೀಡಲಾಯಿತು.


ಹತ್ತಿರದ ಮನೆಗಳಿಗೆ ತೆರಳಿ ಹಸ್ತ ಪ್ರತಿಗಳನ್ನು ವಿತರಿಸಿ ಅರಿವು ಮೂಡಿಸಲಾಯಿತು. ಸರಕಾರಿ ಶಾಲಾ ಸೌಲಭ್ಯ ಇತ್ಯಾದಿ ಶೈಕ್ಷಣಿಕ ಗುಣಮಟ್ಟದ ಶಿಕ್ಷಣ ನೀಡುವ ಬಗ್ಗೆ ಅರಿವು ಮೂಡಿಸಲಾಯಿತು.




ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಸುನೀತಾ ಗಣೇಶ್, ಶಾಲಾ ಮುಖ್ಯಗುರು ಶಶಿಕಲಾ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪೈಕ, ಕೋಶಾಧಿಕಾರಿ ಸುಕುಮಾರ್ ಕಲ್ಪಡ, ಎಸ್ ಡಿ ಎಂ ಸಿ ಉಪಾಧ್ಯಕ್ಷ ರಮೇಶ್ ಉಪ್ಪಡ್ಕ, ಸದಸ್ಯ ಸುಧಾಕರ್ ಕಾಣಿಯೂರು, ಮಾಜಿ ಅಧ್ಯಕ್ಷ ರಾಮಣ್ಣ ಗೌಡ ಮೂಡೈಮಜಲು, ಶಿಕ್ಷಕರಾದ ಜನಾರ್ದನ ಹೇಮಳ, ಗೀತಾ ಕುಮಾರಿ, ಶೃತಿ, ದಿವ್ಯಾ ಹಾಗೂ ಪೋಷಕರು, ಮಕ್ಕಳು ಉಪಸ್ಥಿತರಿದ್ದರು.










