






ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ಮೇ. 31ರಂದು ಮಧ್ಯಾಹ್ನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಕರ್ನಾಟಕ ಸರಕಾರದಲ್ಲಿ ಸಚಿವ ಸ್ಥಾನ ಸಿಗಬೇಕು ಎಂದು ಭಕ್ತಾದಿಗಳ ಸಾಮೂಹಿಕ ಪ್ರಾರ್ಥನೆ ನಡೆಯಿತು.


ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎಂ. ನಿರಂಜನ್ ರೈ ಮಠಂತಬೆಟ್ಟು, ಅಶೋಕ್ ರೈ ಅವರ ತಾಯಿ ಗಿರಿಜಾ ಎಸ್.ರೈ, ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ., ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಜೀರ್ಣೋದ್ಧಾರ ಸಮಿತಿಯ ಸದಸ್ಯರು ಸೇರಿದಂತೆ ನೂರಾರು ಭಕ್ತರು ಭಾಗವಹಿಸಿದ್ದರು. ಪ್ರಧಾನ ಅರ್ಚಕ ರಾಮಕೃಷ್ಣ ಭಟ್ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು.













