ಬೊಬ್ಬೆಕೇರಿ ಶಾಲಾ ಪ್ರಾರಂಭೋತ್ಸವ

0

ಕಾಣಿಯೂರು: ಬೊಬ್ಬೆಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವು ಜೂ.1ರಂದು ನಡೆಯಿತು.

ಶಾಲಾ ಪ್ರವೇಶ ದ್ವಾರದಿಂದ ಬ್ಯಾಂಡ್ ಸೆಟ್ ನೊಂದಿಗೆ ಮೆರವಣಿಗೆಯ ಮೂಲಕ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳಲಾಯಿತು. ಶಿಕ್ಷಕಿಯವರು ವಿದ್ಯಾರ್ಥಿಗಳಿಗೆ ಆರತಿ ಬೆಳೆಗಿಸಿ, ತಿಲಕವನ್ನಿಟ್ಟು ಸ್ವಾಗತಿಸಿದರು. ಬಳಿಕ ನಡೆದ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕ, ಸಮವಸ್ತ್ರ ವಿತರಿಸಲಾಯಿತು.

ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಸುನೀತಾ ಗಣೇಶ್ ಅಧ್ಯಕ್ಷತೆ ವಹಿಸಿದ್ದರು. ಎಸ್ ಡಿ ಎಂ ಸಿ ಉಪಾಧ್ಯಕ್ಷ ರಮೇಶ್ ಉಪ್ಪಡ್ಕ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪೈಕ ಹಾಗೂ ಎಸ್ ಡಿ ಎಂ ಸಿ ಸದಸ್ಯರು, ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಶಶಿಕಲಾ ಸ್ವಾಗತಿಸಿ, ಶಿಕ್ಷಕ ಜನಾರ್ದನ ಹೇಮಳ ವಂದಿಸಿದರು.

LEAVE A REPLY

Please enter your comment!
Please enter your name here