ಬೆಳಿಯೂರುಕಟ್ಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

0

ಬೆಳಿಯೂರುಕಟ್ಟೆ: ಸರ್ಕಾರಿ ಪ್ರೌಢಶಾಲೆ ಬೆಳಿಯೂರುಕಟ್ಟೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಚಟುವಟಿಕೆಗಳು ಪ್ರಾರಂಭೋತ್ಸವ ಕಾರ್ಯಕ್ರಮದ ಮೂಲಕ ಆರಂಭಗೊಂಡಿತು.

ಶಾಲೆಗೆ ಹೊಸದಾಗಿ ದಾಖಲಾದ 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳನ್ನು ಶಿಕ್ಷಕರು ಹಾಗೂ ಹಿರಿಯ ವಿದ್ಯಾರ್ಥಿಗಳು ಸ್ವಾಗತಿಸಿದರು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಮಹಮ್ಮದ್ ಅಶ್ರಫ್ ಬಿ.ಕೆ ಅಧ್ಯಕ್ಷತೆ ವಹಿಸಿದ್ದರು. ಆಂಬ್ರೂಸ್ ಡಿಸೋಜ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಚಂದ್ರಾವತಿ ಸ್ವಾಗತಿಸಿ, ಸಜಿಲ ವಂದಿಸಿದರು. ಲೋಕೇಶ್ ಎಸ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರು ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸಿದರು.ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ವಿದ್ಯಾರ್ಥಿಗಳ ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here