






ವಿದ್ಯಾರ್ಥಿಗಳು ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಬೇಕು-ವಂ|ಡಾ|ಜಾನ್ ಬಾಪ್ಟಿಸ್ಟ್ ಸಲ್ದಾನ


ಪುತ್ತೂರು: ಸಂತ ಫಿಲೋಮಿನ ಅನುದಾನಿತ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂ|ಡಾ|ಜಾನ್ ಬಾಪ್ಟಿಸ್ಟ್ ಸಲ್ದಾನ ಮಾತನಾಡಿ ವಿದ್ಯಾರ್ಥಿಗಳು ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಬೇಕು. ಶಿಕ್ಷಕರು ವಿದ್ಯಾರ್ಥಿಗಳ ಮನಸ್ಸು ಅರಿತುಕೊಂಡು ಅವರಿಗೆ ಬೇಕಾದ ರೀತಿಯಲ್ಲಿ ಬೋಧನೆಯನ್ನು ಮಾಡಬೇಕು. ಮುಂಬರುವ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಬರುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.




ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ರೋಶನ್ ಲಸ್ರಾದೊ, ಶಾಲಾ ಉಪನಾಯಕಿ ಮರಿಯನ್ ವಿಜ್ ಡಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸರ್ವಧರ್ಮ ಪ್ರಾರ್ಥನಾ ವಿಧಿಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ದೀಪ ಬೆಳಗಿಸುವುದರ ಮೂಲಕ ಹೊಸ ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಕಳೆದ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶಿಕ್ಷಕ ಕ್ಲೆಮೆಂಟ್ ಪಿಂಟೋ ಅಭಿನಂದನೆ ಸಲ್ಲಿಸಿ ಮಾತನಾಡಿದರು. ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂ|ಡಾ|ಜಾನ್ ಬಾಪ್ಟಿಸ್ಟ್ ಸಲ್ದಾನರವರನ್ನು ಸ್ವಾಗತಿಸಿ ಸನ್ಮಾನಿಸಲಾಯಿತು. ಮುಖ್ಯಶಿಕ್ಷಕ ವಂ|ಮ್ಯಾಕ್ಸಿಮ್ ಡಿಸೋಜಾ ನೂತನ ಸಂಚಾಲಕರ ಬಗ್ಗೆ ಮಾತನಾಡಿ ಸ್ವಾಗತಿಸಿದರು. ಶಿಕ್ಷಕ ಪೀಟರ್ ನರೇಶ್ ಲೋಬೊ ವಂದಿಸಿದರು. ಶಿಕ್ಷಕಿ ಕಾರ್ಮಿನ್ ಪಾಯಸ್ ಕಾರ್ಯಕ್ರಮ ನಿರೂಪಿಸಿದರು.










