







ರಾಮಕುಂಜ: ಶ್ರೀ ರಾಮಕುಂಜೇಶ್ವರ ವಿದ್ಯಾಲಯದಲ್ಲಿ ನೂತನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮ ಜೂ.1ರಂದು ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಅವರು ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಶಿಕ್ಷಣದೊಂದಿಗೆ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು. ಸಂಚಾಲಕರಾದ ಶಿವಪ್ರಸಾದ್ ಇಜ್ಜಾವು ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು, ಪರಿಶ್ರಮ ಹಾಗೂ ಸತತ ಅಧ್ಯಯನದ ಮೂಲಕ ಜೀವನದಲ್ಲಿ ಯಶಸ್ಸು ಸಾಧಿಸಬೇಕು ಎಂದು ಹೇಳಿದರು.



ಪ್ರಾಂಶುಪಾಲರಾದ ಪ್ರವೀದ್ ಪಿ. ಮಾತನಾಡಿ, ಹೊಸ ಶೈಕ್ಷಣಿಕ ವರ್ಷದಲ್ಲಿ ಗುರಿಗಳನ್ನು ಹೊಂದಿ ಶ್ರದ್ಧೆಯಿಂದ ಅಧ್ಯಯನ ಮಾಡುವಂತೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಪರಿಚಯ ಮಾಡಿ, ಆರತಿ ಎತ್ತಿ ತಿಲಕವನ್ನಿಟ್ಟು ಸ್ವಾಗತಿಸಲಾಯಿತು. ಶಿಕ್ಷಕರು ತಮ್ಮ ಪರಿಚಯವನ್ನು ಮಾಡಿಕೊಂಡರು. ಶಿಕ್ಷಕ ಶಿವಪ್ರಸಾದ್ ನಿರೂಪಿಸಿ, ವಂದಿಸಿದರು. ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆ ಹಾಗೂ ಸ್ವಾಗತ ಗೀತೆ ಹಾಡಿದರು.










