






ಕಾಣಿಯೂರು : ಕೊಪ್ಪ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2026 -27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಜೂನ್ 1 ರಂದು ನಡೆಯಿತು. ಶಾಲಾ ಪ್ರವೇಶ ದ್ವಾರದಿಂದ ಮೆರವಣಿಗೆಯ ಮೂಲಕ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳಲಾಯಿತು. ಶಿಕ್ಷಕಿಯರು ಮತ್ತು ಪೋಷಕರು ವಿದ್ಯಾರ್ಥಿಗಳಿಗೆ ಆರತಿ ಬೆಳಗಿಸಿ ತಿಲಕವನ್ನಿಟ್ಟು ಸ್ವಾಗತಿಸಿದರು.


ಬಳಿಕ ನಡೆದ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ, ಸಮವಸ್ತ್ರ ವಿತರಿಸಲಾಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸೀತಾರಾಮ ಕೊಪ್ಪ ಅಧ್ಯಕ್ಷತೆ ವಹಿಸಿದ್ದರು. ಎಸ್ ಡಿ ಎಂ ಸಿ ಉಪಾಧ್ಯಕ್ಷೆ ರಮಣಿ, ಎಸ್ ಡಿ ಎಂ ಸಿ ಸದಸ್ಯರು, ಪೋಷಕರು, ಶಿಕ್ಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಜ್ಯೋತಿ ದೇವರಮನೆ ಸ್ವಾಗತಿಸಿ ಅತಿಥಿ ಶಿಕ್ಷಕ ಸುರೇಶ ನಾಯ್ಕ ವಂದಿಸಿದರು.













