ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ : ವಿದ್ಯಾರ್ಥಿಗಳಿಗೆ ಸ್ಕೂಲ್ ಕಿಟ್ ವಿತರಣೆ

0

ಈಶ್ವರಮಂಗಳ: ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆ ಈಶ್ವರಮಂಗಲದಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಸಂಸ್ಥೆಯ ಹಿರಿಯ ವಿದ್ಯಾರ್ಥಿ ಹಾಗೂ ಪ್ರಸ್ತುತ ವಕೀಲರಾಗಿರುವ ಗೌರೀಶ್ ತಮ್ಮ ಶಾಲಾ ದಿನಗಳನ್ನು ಸ್ಮರಿಸಿದರು. ಕನ್ನಡ ಮಾಧ್ಯಮ ಶಾಲೆಯಲ್ಲಿರುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಸಾಧನೆ ಮಾಡಬಹುದು ಎಂದು ಕಿವಿಮಾತು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್‌ನ ಪ್ರತಿನಿಧಿ ಕುಮಾರಿ ಪ್ರಜ್ಞಾ ಕುಮಾರಿ ಡಿ ಅವರು, ಗೆಟಿಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಹಯೋಗದಲ್ಲಿ ಟ್ರಸ್ಟ್‌ನ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಕೂಲ್ ಕಿಟ್‌ಗಳನ್ನು ವಿತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತ ಮಂಡಳಿ ಅಧ್ಯಕ್ಷ ಗೋಪಾಲಕೃಷ್ಣ ಕುಂಜತ್ತಾಯ ವಹಿಸಿದ್ದರು. ವೇದಿಕೆಯಲ್ಲಿ ಸಂಪ್ಯ ಹೊರಠಾಣೆಯ ಹೆಡ್ ಕಾನ್‌ಸ್ಟೇಬಲ್ ನಾಗರಾಜ ಕೆ, ಶಾಲಾ ಆಡಳಿತ ಮಂಡಳಿ ಉಪಾಧ್ಯಕ್ಷ ಬರಕೆರೆ ಸೀತಾರಾಮ್ ಭಟ್, ನಿರ್ದೇಶಕ ಕೃಷ್ಣಪ್ಪ ಗೌಡ ಕೆ, ಶಾಲಾ ಮುಖ್ಯ ಗುರುಗಳಾದ ವನಿತಾ ಕೆ ಉಪಸ್ಥಿತರಿದ್ದರು. ಹಿಂದಿ ಶಿಕ್ಷಕಿ ಸುಪ್ರಭಾ ಕಾರ್ಯಕ್ರಮ ನಿರೂಪಿಸಿದರು. ವಿಜ್ಞಾನ ಶಿಕ್ಷಕಿ ವಂದನಾ ಸ್ವಾಗತಿಸಿದರು ಹಾಗೂ ಗಣಿತ ಶಿಕ್ಷಕಿ ವಿನುತ ವಂದಿಸಿದರು.

LEAVE A REPLY

Please enter your comment!
Please enter your name here