







ಬಡಗನ್ನೂರು: “ಪರಿಸರ ಸಂರಕ್ಷಣೆ ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ” ಎಂದು ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಯ ಸಂಚಾಲಕ ವಿಘ್ನೇಶ್ ಹಿರಣ್ಯ ಹೇಳಿದರು.



ಜೂ.5ರಂದು ಸಂಸ್ಥೆಯಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ವಿದ್ಯಾರ್ಥಿ ದೆಸೆಯಿಂದಲೇ ಪ್ರಕೃತಿಯನ್ನು ಪ್ರೀತಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಪರಿಸರ ಸ್ವಚ್ಛತೆಯಿಂದ ಉತ್ತಮ ಆರೋಗ್ಯ ಸಾಧ್ಯ” ಎಂದರು. ಪ್ರೌಢಶಾಲಾ ಮುಖ್ಯಗುರು ಸುಮನ ಬಿ ವಿದ್ಯಾರ್ಥಿಗಳಿಗೆ ಪರಿಸರ ದಿನದ ಮಹತ್ವ ತಿಳಿಸಿದರು.













