ಜೂ.8: ರೋಟರಿ ಪುತ್ತೂರು ಮಲ್ಟಿಸ್ಪೆಷಾಲಿಟಿ ಸ್ಯಾಟಲೈಟ್ ಡೆಂಟಲ್ ಕ್ಲಿನಿಕ್ ನಲ್ಲಿ ಕೆವಿಜಿ ದಂತ ವೈದ್ಯಕೀಯ ಕಾಲೇಜಿನಿಂದ ಉಚಿತ ದಂತ ಚಿಕಿತ್ಸಾ ಶಿಬಿರ

0

ಪುತ್ತೂರು: ಜಿಲ್ಲೆಯ ಹಿರಿಯ ಕ್ಲಬ್ ಎನಿಸಿದ ರೋಟರಿ ಕ್ಲಬ್ ಪುತ್ತೂರು, ರೋಟರಿ ಮಲ್ಟಿಸ್ಪೆಷಾಲಿಟಿ ಸ್ಯಾಟಲೈಟ್ ಡೆಂಟಲ್ ಕ್ಲಿನಿಕ್ ಆಯೋಜನೆಯಲ್ಲಿ ಸುಳ್ಯ ಕೆವಿಜಿ ದಂತ ವೈದ್ಯಕೀಯ ಕಾಲೇಜು ಸಹಯೋಗದಲ್ಲಿ ಜೂ.8 ರಂದು ಬೆಳಿಗ್ಗೆ(9.30)ಯಿಂದ ಅಪರಾಹ್ನ(3.00 ಗಂಟೆ)ದವರೆಗೆ ಬೊಳ್ವಾರು ಮಹಾವೀರ ವೆಂಚರ್ಸ್ ಪುತ್ತೂರು ಪಾಲಿಕ್ಲಿನಿಕ್ ಆವರಣದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಜರಗಲಿದೆ.

ಈ ಶಿಬಿರವು ಪ್ರತಿ ತಿಂಗಳ 2ನೇ ಸೋಮವಾರದಂದು ಉಚಿತ ದಂತ ಚಿಕಿತ್ಸಾ ಶಿಬಿರ ನಡೆಯಲಿರುವುದು. ಉಳಿದ ದಿನಗಳಲ್ಲಿ ರಿಯಾಯಿತಿ ಶುಲ್ಕದಲ್ಲಿ ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲಾಗುವುದು. ಈ ಶಿಬಿರಕ್ಕೆ ಭಾರತೀಯ ದಂತ ವೈದ್ಯಕೀಯ ಸಂಘ ಪುತ್ತೂರು ಸಂಪೂರ್ಣ ಸಹಕಾರವಿದ್ದು ಹೆಚ್ಚಿನ ಮಾಹಿತಿಗಾಗಿ 8792493794 ನಂಬರಿಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here