







ಪುತ್ತೂರು: ವಿವೇಕಾನಂದ ಸೆಂಟ್ರಲ್ ಸ್ಕೂಲಿನಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.



ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ ವಿದ್ಯಾಗಣಪತಿ ಪೂಜೆಯನ್ನು ಶ್ರದ್ಧಾ-ಭಕ್ತಿಯಿಂದ ನೆರವೇರಿಸಲಾಯಿತು. ವೇದಮೂರ್ತಿ ಆಶ್ಲೇಷ ಭಟ್ಟರ ನೇತೃತ್ವದಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ, ಉತ್ತಮ ವಿದ್ಯಾಭ್ಯಾಸ ಹಾಗೂ ಶಾಲೆಯ ಸರ್ವಾಂಗೀಣ ಏಳಿಗೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳು ಭಜನೆಯನ್ನು ಮಾಡಿದರು.



ನೂತನ ಶೈಕ್ಷಣಿಕ ವರ್ಷದ ಅಂಗವಾಗಿ ಪ್ರೀ-ಕೆ. ಜಿ, ಎಲ್. ಕೆ. ಜಿ ಹಾಗೂ ಯು. ಕೆ. ಜಿ ಮಕ್ಕಳನ್ನು ಆರತಿ ಎತ್ತಿ, ತಿಲಕವಿಟ್ಟು ವಿನೂತನ ರೀತಿಯಲ್ಲಿ ಸ್ವಾಗತಿಸಿ, ಎಲ್ಲರಿಗೂ ಪ್ರಸಾದ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಅಧ್ಯಕ್ಷೆ ವಸಂತಿ ಕೆ., ಸಂಚಾಲಕ ಭರತ್ ಪೈ, ಸದಸ್ಯೆ ಶಂಕರಿ ಶರ್ಮ, ಪ್ರಾಂಶುಪಾಲೆ ಸಿಂಧು ವಿ.ಜಿ., ಶಿಕ್ಷಕ ಹಾಗೂ ಶಿಕ್ಷಕೇತರ ವೃಂದ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.










