ಸವಣೂರು, ಐತ್ತೂರು ಗ್ರಾ.ಪಂ.ನಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ- ಅರ್ಜಿ ಸಲ್ಲಿಸಲು ಜೂ.30 ಅಂತಿಮ ದಿನಾಂಕ

0

ಪುತ್ತೂರು: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನರಿಗೆ ವಿಕಲಚೇತನರ ಮೂಲಕವೇ ಅವರು ವಾಸಿಸುವ ವ್ಯಾಪ್ತಿಯಲ್ಲಿ ಶೈಕ್ಷಣಿಕ ಉದ್ಯೋಗ ತರಬೇತಿ, ಆರ್ಥಿಕ ಪುನರ್ವಸತಿ ಮತ್ತು ಸಾಮಾಜಿಕ ಭದ್ರತೆ ಸೌಲಭ್ಯವನ್ನು ಕಲ್ಪಿಸುವ ದೃಷ್ಟಿಯಿಂದ ಪುನರ್ವಸತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡುವ ಸಲುವಾಗಿ ಕಡಬ ತಾಲೂಕಿನ ಸವಣೂರು ಮತ್ತು ಐತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುವ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಹತೆಗಳು
ಅರ್ಜಿ ಸಲ್ಲಿಸುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಸ್ಥಳೀಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದು ವಿಕಲಚೇತನರಾಗಿರಬೇಕು. ವಿಕಲತೆಯು ಕನಿಷ್ಠ ಶೇ.49ರಷ್ಟಿರಬೇಕು. ಅಭ್ಯರ್ಥಿ ಸ್ಥಳೀಯರಾಗಿರಬೇಕು. ಈ ಬಗ್ಗೆ ಸ್ಥಳೀಯ ಪಂಚಾಯತ್‌ನಿಂದ ಧೃಡೀಕರಣ ಸಲ್ಲಿಸತಕ್ಕದ್ದು. ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿದ್ದು, ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ವಯೋಮಿತಿ 18-45 ವರ್ಷದ ಒಳಗಿರಬೇಕು ಮತ್ತು ಪುನಶ್ಚತನ ಸೇವೆ ಸಲ್ಲಿಸಲು ಆಸಕ್ತಿ ಇರಬೇಕು. ಅಂಗವಿಕಲತೆಯ ಬಗ್ಗೆ ವಿಶಿಷ್ಟ ಗುರುತಿನ ಚೀಟಿಯನ್ನು (ಯು.ಡಿ.ಐ.ಡಿ) ಹೊಂದಿರಬೇಕು.

ಅರ್ಜಿ ಸಲ್ಲಿಸಲು 30.06.2026 ಕೊನೆಯ ದಿನಾಂಕವಾಗಿದ್ದು, ಅರ್ಜಿ ನಮೂನೆಯನ್ನು ಪುತ್ತೂರು ತಾಲೂಕು ಪಂಚಾಯತ್ ಕಛೇರಿಯಲ್ಲಿ ಪಡೆದುಕೊಳ್ಳುವುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:0824-2455999, ಅರ್ಜಿ ನಮೂನೆಗಳಿಗಾಗಿ ಕಛೇರಿ ವೇಳೆಯಲ್ಲಿ ಸಂಪರ್ಕಿಸುವುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here