ಪುತ್ತೂರು: ಪೊಕ್ಸೋ ಪ್ರಕರಣದ ಆರೋಪಿಗೆ ಜಾಮೀನು

0

ಪುತ್ತೂರು:ಪೊಕ್ಸೋ ಪ್ರಕರಣದಲ್ಲಿ ಆರೋಪಿಯಾಗಿ ಬಂಧಿತನಾಗಿದ್ದ ಪರ್ಲಡ್ಕದ ಜಯಪ್ರಕಾಶ್ ಎಂಬಾತನಿಗೆ ಪುತ್ತೂರು 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.


ಆರೋಪಿಯು ಪರ್ಲಡ್ಕದ ಮೋಟಾರ್ ರಿಪೇರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು ದಿನಾಂಕ 07/05/26ರಂದು ಸಂತ್ರಸ್ತೆಯು ತನ್ನ ತಾಯಿಗೆ ಕರೆ ಮಾಡುವ ಉದ್ದೇಶದಿಂದ
ಆರೋಪಿಯು ಕೆಲಸ ಮಾಡುತ್ತಿದ್ದ ಅಂಗಡಿಗೆ ಬಂದಾಗ ಆತನು ಸಂತ್ರಸ್ತೆಯನ್ನು ತನ್ನ ತೊಡೆಯ ಮೇಲೆ ಕುಳ್ಳಿರಿಸಿ ಗಟ್ಟಿಯಾಗಿ ತಬ್ಬಿಕೊಂಡು ಖಾಸಗಿ ಭಾಗವನ್ನು ಮುಟ್ಟಿದ್ದಾಗಿ ಆರೋಪಿಸಲಾಗಿದೆ.


ಘಟನೆ ಕುರಿತು ಸಂತ್ರಸ್ತೆ ತನ್ನ ತಾಯಿಗೆ ತಿಳಿಸಿದ್ದರು. ಬಳಿಕ ತಾಯಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಪೊಲೀಸರು ಪೊಕ್ಸೋ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದರು.ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗೆ ಪುತ್ತೂರು 7ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸುಮಂಗಲ ಚಕಲಬ್ಬಿರವರು ಜಾಮೀನು ಮಂಜೂರು ಮಾಡಿದ್ದಾರೆ.ಆರೋಪಿ ಪರ ವಕೀಲ ಮಹೇಶ್ ಕಜೆ ಅವರು ವಾದಿಸಿದ್ದರು.

LEAVE A REPLY

Please enter your comment!
Please enter your name here