






ಉಪ್ಪಿನಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತಕ್ಕೊಳಪಟ್ಟ ಕಾಂಚನದ ಶ್ರೀ ಲಕ್ಷ್ಮೀನಾರಾಯಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನವನ್ನು ಆಚರಿಸಲಾಯಿತು.


ಮುಖ್ಯ ಅತಿಥಿಯಾಗಿದ್ದ ಪ್ರೌಢಶಾಲಾ ವಿಭಾಗದ ಮುಖ್ಯ ಗುರು ರಾಧಾಕೃಷ್ಣ ಭಟ್ ಮಾತನಾಡಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಮರಗಳನ್ನು ನೆಡುವುದು, ಅವುಗಳನ್ನು ಪೋಷಿಸುವ ಮೂಲಕ ಪರಿಸರ ಸಮತೋಲನವನ್ನು ಕಾಪಾಡಬಹುದು ಎಂದು ತಿಳಿಸಿದರು.



ಪ್ರಾಥಮಿಕ ಶಾಲಾ ಮುಖ್ಯಗುರು ಎ. ಲಕ್ಷ್ಮಣ ಗೌಡ ಅವರು ಮಾತನಾಡಿ, ಪರಿಸರದ ಮಹತ್ವ, ಹವಾಮಾನ ಬದಲಾವಣೆ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಯ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಇನ್ನೋರ್ವ ಮುಖ್ಯ ಅತಿಥಿಯಾಗಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಪದ್ಮಯ್ಯ ಡೆಂಬಳೆ ತೆಂಗಿನ ಗಿಡ ನೆಟ್ಟು ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿ ಮೂಡಿಸಿದರು. ವಿದ್ಯಾರ್ಥಿಗಳು ಶಾಲಾ ಪರಿಸರದಲ್ಲಿ ಹೂ ಗಿಡಗಳನ್ನು ನೆಟ್ಟು ಪರಿಸರ ದಿನವನ್ನು ಆಚರಿಸಿದರು.
ಪರಿಸರ ದಿನ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು. ವೇದಿಕೆಯಲ್ಲಿ ಸಹ ಶಿಕ್ಷಕ ರಾಜಶೇಖರಪ್ಪ ಉಪಸ್ಥಿತರಿದ್ದರು. ಶಿಕ್ಷಕರಾದ ಭಾಗ್ಯಲಕ್ಷ್ಮೀ ಸ್ವಾಗತಿಸಿದರು. ವಾರಿಜಾ ವಂದಿಸಿದರು. ಚೈತನ್ಯ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಮಹಾಲಕ್ಷ್ಮೀ ಸಹಕರಿಸಿದರು.










