ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿಣಿ ಸಭೆ

0

ಪುತ್ತೂರು : ಜಿಲ್ಲಾ ಕೃಷಿಕ ಸಮಾಜ ದಕ್ಷಿಣ ಕನ್ನಡ ಮಂಗಳೂರು ಇದರ ಆಡಳಿತ ಮಂಡಳಿಯ ಸಭೆಯು ಜೂ.6 ರಂದು ಮಂಗಳೂರಿನ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನಡೆಯಿತು.


ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷರಾದ ವಿಜಯ ಕುಮಾರ್ ರೈ ಕೋರಂಗ ಇವರು ವಹಿಸಿದ್ದರು. ಪುತ್ತೂರಿನಲ್ಲಿ ಜಿಲ್ಲಾ ಕೃಷಿಕ ಸಮಾಜದ ವತಿಯಿಂದ ನಡೆದ ಮೈಸೂರು ಭಾಗದ ಯಶಸ್ವಿ ಕೃಷಿ ಮೇಳಕ್ಕೆ ಸಹಕರಿಸಿದ ಜನಪ್ರತಿನಿಧಿಗಳಿಗೆ, ಸಂಘ ಸಂಸ್ಥೆಗಳಿಗೆ ಇಲಾಖೆಗಳಿಗೆ ಅಭಿನಂದನೆಯನ್ನು ಸಲ್ಲಿಸಲಾಯಿತು. ಕರ್ನಾಟಕ ರಾಜ್ಯ ಅಧಿಕ ಸಮಾಜದ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಜಿಲ್ಲಾ ಕೃಷಿಕ ಸಮಾಜದ ನಿರ್ದೇಶಕರಾದ ಪದ್ಮನಾಭ ರೈ ಕಲ್ಲಡ್ಕ ಇವರಿಗೆ ಅಭಿನಂದನೆಯನ್ನು ಸಲ್ಲಿಸಲಾಯಿತು. ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು.

ಕೃಷಿ ಭಾಗ್ಯ ಯೋಜನೆಯಲ್ಲಿ ಕೃಷಿ ಹೊಂಡಗಳನ್ನು ನಿರ್ಮಾಣ ಮಾಡಲು ರೈತರಿಗೆ ಶೇಕಡ 50 ರಷ್ಟು ಸಹಾಯಧನ ನೀಡಲಾಗುತ್ತದೆ ಅಲ್ಲದೇ ಕೃಷಿ ಯಂತ್ರೋಪಕರಣಗಳಿಗೆ ಕೂಡ ಸಹಾಯಧನ ದೊರಕಲಿದೆ ಮತ್ತು ಭತ್ತದ ಬೇಸಾಯ ಮಾಡುವವರಿಗೆ ಉಚಿತವಾಗಿ ಬಿತ್ತನೆ ಬೀಜ ಹಾಗೂ ಸಾವಯವ ಗೊಬ್ಬರಗಳನ್ನು ನೀಡಲಾಗುವುದು ಇದರ ಪ್ರಯೋಜನವನ್ನು ರೈತರು ಪಡೆದುಕೊಳ್ಳಬೇಕೆಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರಾದ ಹೊನ್ನಪ್ಪ ಗೌಡ ತಿಳಿಸಿದರು. ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರಾದ ದರ್ಶನ್ ಜಿ ರವರು ಮಾಹಿತಿಯನ್ನು ನೀಡುತ್ತಾ ಜೇನು ಸಾಕಾಣಿಕೆ ಮಾಡುವ ರೈತರಿಗೆ ಸಾಮಾನ್ಯ ವರ್ಗಕ್ಕೆ ಶೇಕಡ75 ಮತ್ತು ಪರಿಶಿಷ್ಟ ಜಾತಿ ಮತ್ತು ವರ್ಗಕ್ಕೆ90 ಶೇಕಡ ಸಹಾಯಧನ ನೀಡಲಾಗುವುದು ಎಂದು ತಿಳಿಸಿದರು. ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಇದರ ಸಹಾಯಕ ಪ್ರಾಧ್ಯಾಪಕರಾದ ಡಾ. ಹರೀಶ್, ಪಶು ಪಾಲನ ಇಲಾಖೆಯ ಉಪನಿರ್ದೇಶಕರಾದ ಡಾ. ಅರುಣ್ ಕುಮಾರ್ ಶೆಟ್ಟಿ ಇಲಾಖ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕೃಷಿಕ ಸಮಾಜಕ್ಕೆ ಕೃಷಿ ಭವನ ನಿರ್ಮಾಣ ಮಾಡಲು ಮಂಗಳೂರಿನ ಜಪ್ಪಿನ ಮೊಗರುನಲ್ಲಿ ಕಾದಿರಿಸಲಾದ 0.55 ಎಕ್ರೆ ಜಾಗವನ್ನು ಗುರುತಿಸಿ ಆವರಣ ರಚಿಸುವುದಾಗಿ ತೀರ್ಮಾನಿಸಲಾಯಿತು. ಜಿಲ್ಲಾ ಕೃಷಿಕ ಸಮಾಜದಲ್ಲಿ ದೀರ್ಘಕಾಲದಿಂದ ಅಧ್ಯಕ್ಷರಾಗಿ ಸೇವೆಯನ್ನು ಸಲ್ಲಿಸಿದ ಸಂಪತ್ ಸಾಮ್ರಾಜ್ಯ ಮೂಡಬಿದಿರೆ ಇವರನ್ನು ಸಭೆಯಲ್ಲಿ ಗೌರವಿಸಲಾಯಿತು. ಸಭೆಯಲ್ಲಿ ಜಿಲ್ಲಾ ಕೃಷಿಕ ಸಮಾಜದ ನಿರ್ದೇಶಕರಾದ ಸಂಜೀವ ಮಠಂದೂರು, ಜಿಲ್ಲಾ ಕೃಷಿಕ ಸಮಾಜದ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ನಿರ್ದೇಶಕರಾದ ಕೃಷ್ಣರಾಜ್ ಮೂಡಬಿದ್ರೆ, ದೇವದಾಸ್ ಭಂಡಾರಿ ಉಳ್ಳಾಲ, ಇಸ್ಮಾಯಿಲ್ ಉಲ್ಲಾಳ, ರಾಜು ಪೂಜಾರಿ ಬೆಳ್ತಂಗಡಿ, ಮಹಾವೀರ ಜೈನ್ ಬೆಳ್ತಂಗಡಿ, ಪದ್ಮರಾಜ್ ಬಲ್ಲಾಲ್ ಬಂಟ್ವಾಳ, ಕೃಷಿ ಇಲಾಖೆಯ ಉಪ ನಿರ್ದೇಶಕರಾದ ಶಿವಶಂಕರ ದಾನ ಗೊಂಡರ, ಉಪ ಕೃಷಿ ನಿರ್ದೇಶಕರಾದ ಅಶೋಕ್ ಸಿಬ್ಬಂದಿಗಳಾದ ಸುಜಾತ, ಮನೋಹರ್ ಹಾಗೂ ತಾಲೂಕು ಎಡಿಎ ಗಳು ಉಪಚಿತರಿದ್ದರು. ಜಂಟಿ ಕೃಷಿ ನಿರ್ದೇಶಕ ಹೊನ್ನಪ್ಪ ಗೋವಿಂದ ಗೌಡ ಸ್ವಾಗತಿಸಿ, ವಂದನಾರ್ಪಣೆಗೈದರು.

LEAVE A REPLY

Please enter your comment!
Please enter your name here