






ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ(ಸ್ವಾಯತ್ತ) ಮಹಾವಿದ್ಯಾಲಯದ ಸ್ನಾತಕೋತ್ತರ ಎಂಎಸ್ಸಿ(ರಸಾಯನ ಶಾಸ್ತ್ರ) ಎಂಕಾಂ ಹಾಗೂ ಜೆಎಂಸಿ ಪದವಿಯ ದ್ವಿತೀಯ ಹಾಗೂ ಚತುರ್ಥ ಸೆಮಿಸ್ಟರ್ ನ ಫಲಿತಾಂಶವು ಜೂ.15ರಂದು ಬೆಳಗ್ಗೆ ಹತ್ತು ಗಂಟೆಗೆ ಕಾಲೇಜಿನ ಯುಯುಸಿಎಂಎಸ್ ಪೋರ್ಟಲ್ ನಲ್ಲಿ ದೊರೆಯಲಿದೆ.
ವಿದ್ಯಾರ್ಥಿಗಳು ತಮ್ಮ ರಿಜಿಸ್ಟ್ರೇಷನ್ ನಂಬರನ್ನು ಹಾಕಿ ಫಲಿತಾಂಶವನ್ನು ಪರಿಶೀಲಿಸಬಹುದು ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ಶ್ರೀಕೃಷ್ಣ ಗಣರಾಜ ಭಟ್ ಹಾಗೂ ಕಾಲೇಜಿನ ಪರೀಕ್ಷಾಂಗ ಕುಲಸಚಿವ ಪ್ರಕಾಶ್ ಕುಮಾರ್ ಪಿ ಇವರು ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.











