ಜೂ.15 : ಸಿಪಿಸಿಆರ್‌ಐ ಪ್ರಾಂತೀಯ ಕ್ಷೇತ್ರ ವಿಟ್ಲ ಇದರ ವತಿಯಿಂದ ಪಾಲ್ತಾಡಿ ಮಂಜುನಾಥನಗರದಲ್ಲಿ ಕೃಷಿ ಉಳಿಸಿ ಅಭಿಯಾನ

0

ಸವಣೂರು: ಸಿಪಿಸಿಆರ್‌ಐ ಪ್ರಾಂತೀಯ ಕ್ಷೇತ್ರ ವಿಟ್ಲ ಇದರ ವತಿಯಿಂದ ಸಿದ್ದಿವಿನಾಯಕ ಸೇವಾ ಸಂಘ ಮಂಜುನಾಥನಗರ ಇದರ ಸಹಯೋಗದಲ್ಲಿ ಪಾಲ್ತಾಡಿ ಗ್ರಾಮದ ಮಂಜುನಾಥನಗರ ಶ್ರೀ ಸಿದ್ದಿವಿನಾಯಕ ಸಭಾಭವನದಲ್ಲಿ ಕೃಷಿ ಉಳಿಸಿ ಅಭಿಯಾನದ ಅಂಗವಾಗಿ ಮಾಹಿತಿ ಕಾರ್ಯಗಾರ ಜೂ.15ರಂದು ಬೆಳಿಗ್ಗೆ 10.30ರಿಂದ ನಡೆಯಲಿದೆ.

ಕಾರ್ಯಾಗಾರವನ್ನು ಸಿಪಿಸಿಆರ್‌ಐ ಹಿರಿಯ ವಿಜ್ಞಾನಿ ಡಾ.ನಾಗರಾಜ್ ಎನ್.ಆರ್ ಅವರು ನಡೆಸಿಕೊಡಲಿದ್ದಾರೆ.

ಏನಿದು ಕೃಷಿ ಉಳಿಸಿ ಅಭಿಯಾನ ?
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಮಾರ್ಗದರ್ಶನದಂತೆ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ಪ್ರಾಂತೀಯ ಕ್ಷೇತ್ರ ವಿಟ್ಲ ಇದರ ವತಿಯಿಂದ ರೈತರಲ್ಲಿ ಮಣ್ಣಿನ ಆರೋಗ್ಯದ ಮಹತ್ವದ ಕುರಿತು ಅರಿವು ಮೂಡಿಸುವುದು, ಮಣ್ಣಿನ ಪರೀಕ್ಷೆ ಆಧಾರಿತ ಸಮತೋಲಿತ ರಸಗೊಬ್ಬರ ಬಳಕೆಯನ್ನು ಉತ್ತೇಜಿಸುವುದು ಹಾಗೂ ರಾಸಾಯನಿಕ ಗೊಬ್ಬರಗಳ ಅಸಮತೋಲಿತ ಬಳಕೆಯನ್ನು ತಗ್ಗಿಸುವುದು. ಜತೆಗೆ ಸಮಗ್ರ ಪೋಷಕಾಂಶ ನಿರ್ವಹಣೆ, ಹಸಿರು ಗೊಬ್ಬರ, ಸಾವಯವ ಹಾಗೂ ಜೈವಿಕ ಗೊಬ್ಬರಗಳ ಬಳಕೆ ಮತ್ತು ನೈಸರ್ಗಿಕ ಕೃಷಿ ಪದ್ಧತಿಗಳ ಅಳವಡಿಕೆಗೆ ಉತ್ತೇಜನ ನೀಡುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ.

ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವುದರ ಜತೆಗೆ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ, ಉತ್ಪಾದನಾ ವೆಚ್ಚ ಕಡಿತ ಹಾಗೂ ಕೃಷಿಯ ಸುಸ್ಥಿರತೆಯನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಈ ಅಭಿಯಾನವನ್ನು ದೇಶಾದ್ಯಂತಅನುಷ್ಠಾನಗೊಳಿಸಲಾಗುತ್ತಿದೆ.

ರೈತರೊಂದಿಗೆ ನೇರ ಸಂವಾದ ಪ್ರಾತ್ಯಕ್ಷಿಕೆಗಳು ಹಾಗೂ ತಾಂತ್ರಿಕ ಸಲಹಾ ಕಾರ್ಯಕ್ರಮಗಳು ನಡೆಯಲಿದ್ದು. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಣ್ಣಿನ ಆರೋಗ್ಯ ಸಂರಕ್ಷಣೆ ಹಾಗೂ ಸುಸ್ಥಿರ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಿಕೊಳ್ಳುವುದು ಅಭಿಯಾನದ ಉದ್ದೇಶ.

LEAVE A REPLY

Please enter your comment!
Please enter your name here