







ಪುತ್ತೂರು: ಸಂತ ಫಿಲೋಮಿನ ಅನುದಾನಿತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ದೈಹಿಕ ಸಾಮರ್ಥ್ಯ ಹೆಚ್ಚಿಸುವ ಸಲುವಾಗಿ ನೂತನವಾಗಿ ತಯಾರಿಸಿದ ವೈಟ್ಲಿಫ್ಟಿಂಗ್ ಕೊಠಡಿಯ ಉದ್ಘಾಟನೆ ನಡೆಯಿತು.


ಶಾಲಾ ಸಂಚಾಲಕರಾದ ವಂ|ಡಾ| ಜಾನ್ ಬ್ಯಾಪ್ಟಿಸ್ಟ್ ಸಲ್ದಾನರವರು ಉದ್ಘಾಟಿಸಿ ಆಶೀರ್ವಚನ ನೀಡಿ ವಿದ್ಯಾರ್ಥಿಗಳಲ್ಲಿ ದೈಹಿಕ ಕ್ಷಮತೆಯನ್ನು ವೃದ್ಧಿಸಲು ವೈಟ್ಲಿಫ್ಟಿಂಗ್ನ ಅಗತ್ಯತೆ ಇದೆ. ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆಯಬೇಕು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ಇದು ಅತ್ಯಗತ್ಯ ಎಂದರು. ಶಾಲಾ ಮುಖ್ಯಗುರು ವಂ|ಮ್ಯಾಕ್ಸಿಮ್ ಡಿಸೋಜ ಸ್ವಾಗತಿಸಿ ಶಿಕ್ಷಕ ಕ್ಲೆಮೆಂಟ್ ಪಿಂಟೊ ವಂದಿಸಿದರು.



ದೈಹಿಕ ಶಿಕ್ಷಣ ಶಿಕ್ಷಕ ಪೀಟರ್ ನರೇಶ್ ಮತ್ತು ಧನ್ಯರವರು ಮೇಲ್ವಿಚಾರಣೆ ವಹಿಸಿದರು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಹಕರಿಸಿದರು.










