ರಾಷ್ಟ್ರೀಯ ಪಲ್ಸ್ ಪೋಲಿಯೋ ನಿರ್ಮೂಲನಾ ಲಸಿಕೆ- ಜೂ.15: ಪುತ್ತೂರು ತಾ| ಸಮನ್ವಯ ಸಮಿತಿ ಸಭೆ

0

ಪುತ್ತೂರು: 2026ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂಗವಾಗಿ 5 ವರ್ಷದೊಳಗಿನ ಮಕ್ಕಳಿಗೆ ಜೂ.28ರಿಂದ ಜು.1ರವರೆಗೆ ದೇಶದಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ನಿರ್ಮೂಲನಾ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಪುತ್ತೂರು/ಕಡಬ ತಾಲೂಕಿನಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಜನಪ್ರತಿನಿಧಿಗಳ, ಸಂಘಸಂಸ್ಥೆಗಳ ಹಾಗೂ ಎಲ್ಲಾ ಇಲಾಖೆಗಳ ಸಹಕಾರ ಅಗತ್ಯವಾಗಿರುತ್ತದೆ. ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಉತ್ತಮ ಪ್ರಗತಿ ಸಾಧಿಸುವ ಕುರಿತು ವಿಚಾರ ವಿನಿಮಯ ಹಾಗೂ ಕಾರ್ಯಕ್ರಮ ರೂಪಿಸುವ ಸಲುವಾಗಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ತಾಲೂಕು ಸಮನ್ವಯ ಸಮಿತಿ ಅಧ್ಯಕ್ಷರಾದ ಪುತ್ತೂರು ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಜೂ.15ರಂದು ಮಧ್ಯಾಹ್ನ 12 ಗಂಟೆಗೆ ಪುತ್ತೂರು ಮಿನಿ ವಿಧಾನಸೌಧದಲ್ಲಿನ ಸಹಾಯಕ ಆಯುಕ್ತರ ಕಛೇರಿ ಸಭಾಂಗಣದಲ್ಲಿ ಸಮಿತಿ ಸಭೆ ನಡೆಯಲಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here