ಆಲಂಕಾರು ಬಿಲ್ಲವ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ ಪುಸ್ತಕ ವಿತರಣೆ

0

ಆಲಂಕಾರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಗ್ರಾಮ ಸಮಿತಿ, ಹಾಗೂ ಬಿಲ್ಲವ ಮಹಿಳಾ ವೇದಿಕೆ ಆಲಂಕಾರು ಇವರ ಸಂಯುಕ್ತ ಆಶ್ರಯದಲ್ಲಿ ವಾರ್ಷಿಕ ಮಹಾಸಭೆ ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ರತ್ನಶ್ರೀ ಪದ್ಮ ನಿಲಯ, ಆಲಂಕಾರಿನಲ್ಲಿ ನಡೆಯಿತು.


ಕಾರ್ಯಕ್ರಮವನ್ನು ಪುತ್ತೂರು ತಾಲೂಕು ಬಿಲ್ಲವ ಸಂಘದ ಜೊತೆ ಕಾರ್ಯದರ್ಶಿ ಪುರುಷೋತ್ತಮ ಬರೆಂಬೆಟ್ಟು ದೀಪ ಪ್ರಜ್ವಲಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಂಘದ ಜನಪರ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ, ಸಮಾಜಮುಖಿ ಸೇವೆಗಳಲ್ಲಿ ಸಂಘದ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.


ಮುಖ್ಯ ಅತಿಥಿಗಳಾಗಿ ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಮುತ್ತಪ್ಪ ಪೂಜಾರಿ ನೈಯ್ಯಲ್ಗ, ಕಡಬ ತಾಲೂಕು ಬಿಲ್ಲವ ಸಂಘದ ಉಪಾಧ್ಯಕ್ಷೆ ಗೀತಾ ಉಂಡಿಲ, ಜೊತೆ ಕಾರ್ಯದರ್ಶಿ ಕೃಷ್ಣಪ್ಪ ಅಮೈ, ಪುತ್ತೂರು ತಾಲೂಕು ಬಿಲ್ಲವ ಸಂಘದ ಆಲಂಕಾರು ವಲಯ ಸಂಚಾಲಕ ದಿನೇಶ್ ಕೇಪುಳು ಹಾಗೂ ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಮಲ್ಲಿಕಾ ಜಯಕರ ಪೂಜಾರಿ ಕಲ್ಲೇರಿ ಉಪಸ್ಥಿತರಿದ್ದರು.

ಗ್ರಾಮ ಸಮಿತಿಯ ಸದಸ್ಯರ ಸಹಕಾರದಿಂದ ಒಂದನೇ ತರಗತಿಯಿಂದ ಪದವಿ ವ್ಯಾಸಂಗದವರೆಗೆ ಅಧ್ಯಯನ ಮಾಡುತ್ತಿರುವ ಒಟ್ಟು 57 ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತು.ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಆಲಂಕಾರು ಬಿಲ್ಲವ ಗ್ರಾಮ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಟ್ಟೆಮಜಲುರವರು ಸಂಘದ ವಿವಿಧ ಜನಪರ ಕಾರ್ಯಕ್ರಮಗಳಿಗೆ ಸದಸ್ಯರು ನೀಡುತ್ತಿರುವ ಸಹಕಾರವನ್ನು ಶ್ಲಾಘಿಸಿ,ಇನ್ನು ಮುಂದೆಯೂ ಹೆಚ್ಚಿನ ಸಹಕಾರ ನೀಡುವಂತೆ ವಿನಂತಿಸಿದರು.


ನಮಿತಾ ಕೊಂಡಾಡಿ ಪ್ರಾರ್ಥಿಸಿ, ಸದಾನಂದ ಕುಮಾರ್ ಮಡ್ಯೊಟ್ಟು ಕಾರ್ಯಕ್ರಮ ನಿರೂಪಿಸಿ ಜಯಂತ ಎನ್. ನೆಕ್ಕಿಲಾಡಿ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರ ಮಂಡಿಸಿ ಧನ್ಯವಾದ ಸಮರ್ಪಿಸಿದರು

LEAVE A REPLY

Please enter your comment!
Please enter your name here