ಹದಗೆಟ್ಟ ವಿವೇಕಾನಂದ ಕ್ಯಾಂಪಸ್ ಸಂಪರ್ಕ ರಸ್ತೆ : ದುರಸ್ತಿಗೆ ಸಂಸದರಿಗೆ ಮನವಿ

0

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ.) ಪುತ್ತೂರು ಇದರ ವಿವೇಕಾನಂದ ಕ್ಯಾಂಪಸ್‌ಗೆ ಸಂಪರ್ಕ ಕಲ್ಪಿಸುವ ರೈಲ್ವೇ ಬ್ರಿಡ್ಜ್ ನ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಕೂಡಲೇ ದುರಸ್ತಿ ಹಾಗೂ ಡಾಮರೀಕರಣಗೊಳಿಸುವಂತೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಸಲಾಗಿದೆ.

ಪ್ರತಿದಿನ ಸಾವಿರಾರು ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಬಳಸುವ ಈ ರಸ್ತೆಯಲ್ಲಿ ಹಲವೆಡೆ ದೊಡ್ಡ ಗುಂಡಿಗಳು ಉಂಟಾಗಿದ್ದು, ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.

ಮಳೆಗಾಲದಲ್ಲಿ ಗುಂಡಿಗಳಲ್ಲಿ ನೀರು ನಿಂತು ಅಪಘಾತಗಳ ಸಂಭವ ಹೆಚ್ಚಾಗಿದ್ದು, ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಕೂಡಲೇ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳುವುದು ಅತ್ಯಗತ್ಯವಾಗಿದೆ ಎಂದು ಸಂಘ ತಿಳಿಸಿದೆ.

“ರಸ್ತೆಯಲ್ಲಿರುವ ಗುಂಡಿಗಳನ್ನು ತುರ್ತಾಗಿ ಮುಚ್ಚಿಸಿ, ಸಂಪೂರ್ಣ ರಸ್ತೆಯನ್ನು ಡಾಮರೀಕರಣಗೊಳಿಸಿ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಮನವಿಯಲ್ಲಿ ಕೋರಲಾಗಿದೆ.

LEAVE A REPLY

Please enter your comment!
Please enter your name here