ಜೂನ್ 20 ರಂದು ವಿವೇಕಾನಂದ ಸ್ವಾಯತ್ತ ಕಾಲೇಜಿನ ಪದವಿ ಫಲಿತಾಂಶ ಪ್ರಕಟ

0

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇದರ 2025-26ನೇ ಶೈಕ್ಷಣಿಕ ಸಾಲಿನ ಮೇ/ಜೂನ್ 2026ರ ಪದವಿ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶವನ್ನು ಜೂನ್ 20, 2026ರಂದು ಪ್ರಕಟಿಸಲಾಗುವುದು.

ಬಿ.ಎ., ಬಿ.ಎಸ್‌ಸಿ., ಬಿ.ಕಾಂ., ಬಿ.ಬಿ.ಎ. ಹಾಗೂ ಬಿ.ಸಿ.ಎ. ವಿಭಾಗಗಳ ವಿದ್ಯಾರ್ಥಿಗಳ ಫಲಿತಾಂಶಗಳನ್ನು ವಿದ್ಯಾರ್ಥಿಗಳು ಯುಯುಸಿಎಂಎಸ್ (UUCMS) ಪೋರ್ಟಲ್‌ನಲ್ಲಿ ವೀಕ್ಷಿಸಬಹುದಾಗಿದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆಯ ಮೂಲಕ ಫಲಿತಾಂಶ ಪರಿಶೀಲಿಸಬಹುದು ಎಂದು ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಹಾಗೂ ಪರೀಕ್ಷಾಂಗ ವಿಭಾಗದ ಕುಲಸಚಿವ ಪ್ರಕಾಶ್ ಕುಮಾರ್ ಪಿ ಅವರು ಜಂಟಿಯಾಗಿ ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here