






ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಕೆರೆಮೂಲೆಯಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೂ.19 ರ ಬೆಳಗ್ಗೆ ಬೆಳಕಿಗೆ ಬಂದಿದೆ.
ಕೆರೆಮೂಲೆ ನಿವಾಸಿ ಶೇಖರ್ ಎಂಬವರ ಪುತ್ರ ಜಗದೀಶ್ (22ವ) ಆತ್ಮಹತ್ಯೆ ಮಾಡಿಕೊಂಡವರು. ಪೈಂಟಿಂಗ್ ಕೆಲಸ ಮಾಡುತ್ತಿದ್ದ ಅವರು ಮನೆಯಂಗಳದ ಮರದ ಗೆಲ್ಲಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತರು ತಂದೆ ಶೇಖರ್, ತಾಯಿ, ಇಬ್ಬರು ಸಹೋದರರನ್ನು ಅಗಲಿದ್ದಾರೆ.












