







ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರು ಜೂ.20ರಂದು ಬೆಳಿಗ್ಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಮಾಡಿದರು.


ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಕ್ತಿ ತುಂಬುವಂತೆ,ಮುಂದಿನ ದಿನ ರಾಜ್ಯ ಬಿಜೆಪಿ ಸಂಘಟನೆ ಶಕ್ತಿಯುತವಾಗಬೇಕು ಮತ್ತು ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರಕಾರ ಬರುವಂತೆ ಕಿಶೋರ್ ಕುಮಾರ್ ಅವರು ದೇವಳದಲ್ಲಿ ತುಪ್ಪದ ದೀಪ ಬೆಳಗಿಸಿ ಶ್ರೀ ದೇವರ ಸತ್ಯ ಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿದರು.



ಈ ಸಂದರ್ಭ ಪುತ್ತೂರು ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಶಶಿಧರ್ ನಾಯಕ್, ಬಿಜೆಪಿ ಹಿಂದುಳಿದ ಮೋರ್ಚಾ ಅಧ್ಯಕ್ಷ ನಿರಂಜನ್ ಮಾನ್ಯ, ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ನಿರ್ದೇಶಕ ಚಂದ್ರಶೇಖರ್ ರಾವ್ ಬಪ್ಪಳಿಗೆ, ಸುನಿತ್, ನಾಗೇಂದ್ರ ಬಾಳಿಗ, ನಾಗೇಶ್ ಟಿ.ಎಸ್, ಪ್ರವೀಣ್ ರೈ ಮತ್ತಿತರರು ಉಪಸ್ಥಿತರಿದ್ದರು.










