







ಪುತ್ತೂರು: ಹಾರಾಡಿ ಸೇತುವೆಯ ಕೆಳಭಾಗದಲ್ಲಿ ಕಾಮಗಾರಿ ಆರಂಭಗೊಂಡಿದ್ದು, ಸುರಕ್ಷತಾ ದೃಷ್ಟಿಯಿಂದ ವಾಹನ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲಾಗಿದೆ.


ಪುತ್ತೂರು-ಉಪ್ಪಿನಂಗಡಿ ರಸ್ತೆಯ ಬೊಳುವಾರುದಿಂದ ಸೇಡಿಯಾಪುವರೆಗೆ ಚತುಷ್ಪಥ ಕಾಂಕ್ರಿಟೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ಹಾರಾಡಿ ರೈಲ್ವೆ ಸೇತುವೆಯ ಕೆಳಭಾಗದ ರಸ್ತೆ ಕಿರಿದಾಗಿರುವುದರಿಂದ ದ್ವಿಮುಖ ವಾಹನ ಸಂಚಾರ ಸಾಧ್ಯವಿಲ್ಲ.ಕಾಮಗಾರಿ ಸುಗಮವಾಗಿ ನಡೆಯಲು ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಬದಲಿ ರಸ್ತೆಗೆ ಅವಕಾಶ ನೀಡುವಂತೆ ಪುತ್ತೂರು ಉಪ ವಿಭಾಗದ ಲೋಕೋಪಯೋಗಿ ಇಲಾಖೆಯವರು ಸಲ್ಲಿಸಿದ ಪ್ರಸ್ತಾವನೆಯಂತೆ ಜಿಲ್ಲಾಧಿಕಾರಿಯವರು, ಸದರಿ ರಸ್ತೆಯಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.



ಸಂಚರಿಸಬೇಕಾದ ಬದಲಿ ರಸ್ತೆಗಳು
ಪುತ್ತೂರಿನಿಂದ ಉಪ್ಪಿನಂಗಡಿಗೆ ತೆರಳುವ ವಾಹನಗಳು ಪುತ್ತೂರು ಖಾಸಗಿ ಬಸ್ ನಿಲ್ದಾಣ ಮಾರ್ಗವಾಗಿ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆ ಮೂಲಕ ಕೊಟೇಚಾ ಹಾಲ್ ಮುಖಾಂತರ ಉಪ್ಪಿನಂಗಡಿ ರಸ್ತೆಯನ್ನು ಸಂಪರ್ಕಿಸಬೇಕು. ಉಪ್ಪಿನಂಗಡಿಯಿಂದ ಪುತ್ತೂರಿಗೆ ಬರುವ ವಾಹನಗಳು ಕೊಟೇಚಾ ಹಾಲ್ ಮೂಲಕ ಎಪಿಎಂಸಿ ರಸ್ತೆಯಾಗಿ ಪುತ್ತೂರು ಮುಖ್ಯ ರಸ್ತೆಯನ್ನು ಸಂಪರ್ಕಿಸಬೇಕು. ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ತೆರಳುವ ವಾಹನಗಳು ಪಡೀಲ್ ಜಂಕ್ಷನ್ ಮೂಲಕ ನೆಹರೂನಗರ ಮಾರ್ಗದಲ್ಲಿ ಸಂಚರಿಸಬೇಕು. ಸದರಿ ರಸ್ತೆಗಳಲ್ಲಿ ಸಂಚಾರ ಬದಲಾವಣೆಗೆ ಸಂಬಂಧಿಸಿದ ಸೂಚನಾ ಫಲಕಗಳನ್ನು ಅಳವಡಿಸಿ, ವಾಹನ ಸಂಚಾರ ನಿಯಂತ್ರಣಕ್ಕೆ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸುವಂತೆ ಜಿಲ್ಲಾಧಿಕಾರಿಯವರು ಪೊಲೀಸ್ ಇಲಾಖೆಗೆ ಸೂಚಿಸಿದ್ದಾರೆ.










