ಕಾಣಿಯೂರು ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

0

ಕಾಣಿಯೂರು: ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಶಾಲೆಯ ಹಿರಿಯ ವಿದ್ಯಾರ್ಥಿ, ಉದ್ಯಮಿ ಧರ್ಣಪ್ಪ ಗೌಡ ಅಂಬುಲ ಅವರು ದೀಪ ಬೆಳಗಿಸುವುದರ ಮೂಲಕ ಆಚರಿಸಲಾಯಿತು. ಅಧ್ಯಕ್ಷತೆಯನ್ನು ಶಾಲಾ ಎಸ್ ಡಿಎಂಸಿ ಅಧ್ಯಕ್ಷ ಪರಮೇಶ್ವರ ಗೌಡ ಅನಿಲ ವಹಿಸಿದ್ದರು. ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ರಾಮಣ್ಣ ಗೌಡ ಮುಗರಂಜ, ಗೌರಿ ಮಾಡೋಡಿ, ಎಸ್ ಡಿ ಎಂ ಸಿ ಸದಸ್ಯರಾದ ದಿನೇಶ್ ಅನ್ಯಾಡಿ, ಸೀತಾರಾಮ ಮಿತ್ತಮೂಲೆ ಉಪಸ್ಥಿತರಿದ್ದರು. ಶಾಲಾ ಮುಖ್ಯ ಗುರು ಶಶಿಕಲಾ ಅವರು ಸ್ವಾಗತಿಸಿದರು. ಶಿಕ್ಷಕಿ ಸುಜಯ ವಂದಿಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಕೆ ಕಾರ್ಯಕ್ರಮ ನಿರೂಪಿಸಿದರು.ಯೋಗ ಶಿಕ್ಷಕಿ ಸರೋಜಾ ಪಿ ಕೆ ಯೋಗಾಸನ ಕಾರ್ಯಕ್ರಮ ನಡೆಸಿಕೊಟ್ಟರು. ಗಣ್ಯರು ಶಾಲೆಯ ವಿದ್ಯಾರ್ಥಿಗಳು ಮತ್ತು ಅಧ್ಯಾಪಕ ವೃಂದವರು ಯೋಗಾಸನದಲ್ಲಿ ಪಾಲ್ಗೊಂಡರು.

LEAVE A REPLY

Please enter your comment!
Please enter your name here