






ಪುತ್ತೂರು: ರಾಜ್ಯದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಬಿಲ್ಲವ ಸಮುದಾಯದ ನಾಯಕ ಬಿ.ಕೆ ಹರಿಪ್ರಸಾದ್ ರವರಿಗೆ ಪುತ್ತೂರು ತಾಲೂಕು ಬಿಲ್ಲವ ಸಂಘದ ಪದಾಧಿಕಾರಿಗಳು ಬೆಂಗಳೂರಿನಲ್ಲಿ ಹೂಗುಚ್ಛ ನೀಡಿ ಅಭಿನಂದಿಸಿ ಶುಭ ಹಾರೈಸಿದ್ದಾರೆ.



ಈ ಸಂದರ್ಭದಲ್ಲಿ ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಕಾರ್ಯದರ್ಶಿ ಬಿ.ಟಿ ಮಹೇಶ್ಚಂದ್ರ ಸಾಲ್ಯಾನ್, ಪ್ರಥಮ ಉಪಾಧ್ಯಕ್ಷ ಚಿದಾನಂದ ಸುವರ್ಣ, ಕೋಶಾಧಿಕಾರಿ ಜನಾರ್ದನ ಪೂಜಾರಿ ಪದಡ್ಕ, ಗೆಜ್ಜೆಗಿರಿ ಕೋಟಿ-ಚೆನ್ನಯ ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ ಉಪಸ್ಥಿತರಿದ್ದರು.












