ಪುತ್ತೂರು: ಕ್ರೀಡಾ ಸಾಧನೆಗಾಗಿ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿಗೆ ₹1,25,000 ನಗದು ಪುರಸ್ಕಾರ

0

ಪುತ್ತೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಕ್ರೀಡಾ ಸ್ಪರ್ಧೆಗಳಲ್ಲಿ ಗಣನೀಯ ಸಾಧನೆ ಮಾಡಿದ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಗೆ ₹1,25,000 ನಗದು ಪುರಸ್ಕಾರ ಲಭಿಸಿದೆ.

2024-25ನೇ ಶೈಕ್ಷಣಿಕ ಸಾಲಿನಲ್ಲಿ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ವಲಯ, ಅಂತರ್ವಲಯ, ವಿಶ್ವವಿದ್ಯಾನಿಲಯ ಮತ್ತು ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿತ್ತು. ಕಾಲೇಜಿನ ಈ ಸಾಧನೆಯನ್ನು ಗುರುತಿಸಿ ವಿಶ್ವವಿದ್ಯಾನಿಲಯದ ಕ್ರೀಡಾ ಅಭಿವೃದ್ಧಿ ವಿಭಾಗ ಈ ನಗದು ಪುರಸ್ಕಾರವನ್ನು ನೀಡಿದೆ.ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದ ‘ಸಾಧಕರ ದಿನಾಚರಣೆ’ ಕಾರ್ಯಕ್ರಮದಲ್ಲಿ ಉಪಕುಲಪತಿ ಡಾ. ವಿದ್ಯಾಶಂಕರ್ ಎಸ್. ಅವರು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯದ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.ಕಾಲೇಜಿನ ಪರವಾಗಿ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥ ಡಾ. ಶ್ರೀಕಾಂತ್ ರಾವ್ ಎಸ್.ಕೆ. ಮತ್ತು ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಅವರು ಸಮಾರಂಭದಲ್ಲಿ ಪಾಲ್ಗೊಂಡು ಪ್ರಶಸ್ತಿ ಸ್ವೀಕರಿಸಿದರು.ಈ ಸಾಧನೆಗೆ ಶ್ರಮವಹಿಸಿದ ವಿದ್ಯಾರ್ಥಿಗಳು, ತರಬೇತುದಾರರು ಹಾಗೂ ಸಿಬ್ಬಂದಿಯನ್ನು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿ ಅಭಿನಂದಿಸಿದೆ.

LEAVE A REPLY

Please enter your comment!
Please enter your name here