ಕುದ್ಮಾರು ಶಾಲೆಯಲ್ಲಿ “ಮಾದಕ ವ್ಯಸನ ಮುಕ್ತ ಭಾರತ” ಜಾಗೃತಿ ಕಾರ್ಯಕ್ರಮ

0

ಕಾಣಿಯೂರು: ಕುದ್ಮಾರು ಸ. ಉ. ಹಿ. ಪ್ರಾ. ಶಾಲೆಯಲ್ಲಿ “ಮಾದಕ ವ್ಯಸನ ಮುಕ್ತ ಭಾರತ” ಅಭಿಯಾನದ ಅಂಗವಾಗಿ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಬೆಳ್ಳಾರೆ ಪೊಲೀಸ್ ಠಾಣೆಯ ಎ ಎಸ್ ಐ ರವೀಂದ್ರ ಮತ್ತು ಮುಖ್ಯ ಪೋಲಿಸ್ ಪೇದೆ ಅಶೋಕ್ ಅವರು ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ಆರೋಗ್ಯ, ಶೈಕ್ಷಣಿಕ ಮತ್ತು ಸಾಮಾಜಿಕ ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ, ವಿದ್ಯಾರ್ಥಿಗಳಿಂದ ಮಾದಕ ವ್ಯಸನ ವಿರೋಧಿ ಪ್ರತಿಜ್ಞೆ ಸ್ವೀಕರಿಸಿ, ವ್ಯಸನದ ದುಷ್ಪರಿಣಾಮಗಳನ್ನು ಮನದಟ್ಟುಗೊಳಿಸಿದರು. “ಮಾದಕ ವಸ್ತುಗಳಿಂದ ದೂರವಿರಿ, ಆರೋಗ್ಯಕರ ಜೀವನ ನಡೆಸಿರಿ ಎಂದರು.


ಕಾರ್ಯಕ್ರಮದಲ್ಲಿ ಶಿಕ್ಷಕರು, ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇಲಾಖೆ ಹಾಗೂ ಶಾಲೆ ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿದರೆ ಯುವಜನರಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದು ತಿಳಿಸಿತು. ಮುಖ್ಯ ಶಿಕ್ಷಕಿ ಮಿನಿವರ್ಗೀಸ್ ಸ್ವಾಗತಿಸಿ, ಸಹಶಿಕ್ಷಕಿ ವೀಣಾ . ಕೆ. ವಂದಿಸಿ, ಸಹ ಶಿಕ್ಷಕಿ ಸುಜಾತ . ಬಿ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here