ಎಸ್‌ಡಿಪಿಐ 18ನೇ ಸಂಸ್ಥಾಪನಾ ದಿನಾಚರಣೆ: ಪುತ್ತೂರು ಕ್ಷೇತ್ರದಲ್ಲಿ ಸಂಭ್ರಮದ ಆಚರಣೆ

0

ಪುತ್ತೂರು: ಎಸ್‌ಡಿಪಿಐ ಪಕ್ಷದ 18ನೇ ಸಂಸ್ಥಾಪನಾ ದಿನಾಚರಣೆಯನ್ನು ಪುತ್ತೂರು ವಿಧಾನಸಭಾ ಕ್ಷೇತ್ರದಾದ್ಯಂತ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರದಾದ್ಯಂತ ವಿವಿಧೆಡೆ ಧ್ವಜಾರೋಹಣ ನೆರವೇರಿಸಲಾಯಿತು ಹಾಗೂ ಸಾಲ್ಮರದಲ್ಲಿ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.


ಕ್ಷೇತ್ರದ ವಿವಿಧ ಬ್ರಾಂಚ್ ಮತ್ತು ಬ್ಲಾಕ್ ಮಟ್ಟದಲ್ಲಿ ಪಕ್ಷದ ಧ್ವಜವನ್ನು ಹಾರಿಸಲಾಯಿತು. ಆಯಾ ಸಮಿತಿಗಳ ಅಧ್ಯಕ್ಷರು ಧ್ವಜಾರೋಹಣ ನೆರವೇರಿಸಿದರು. ಈ ಕಾರ್ಯಕ್ರಮಗಳು ವಿಟ್ಲ, ಪುಣಚ, ಕಂಬಳಬೆಟ್ಟು, ಕಬಕ, ಕೊಡಿಪ್ಪಾಡಿ, ಬನ್ನೂರು, ಸಾಲ್ಮರ, ಸಂಟ್ಯಾರ್, ಕುಂಬ್ರ, ಈಶ್ವರಮಂಗಲ, ಕೂರ್ನಡ್ಕ ಮತ್ತು ಪರ್ಲಡ್ಕ ಸೇರಿದಂತೆ ಒಟ್ಟು 12 ಕಡೆಗಳಲ್ಲಿ ನಡೆದವು. ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಸಾಲ್ಮರದಲ್ಲಿ ಆಯೋಜಿಸಲಾಗಿದ್ದ ಕ್ರೀಡಾಕೂಟದಲ್ಲಿ ಸ್ಥಳೀಯ ಕಾರ್ಯಕರ್ತರು ಮತ್ತು ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮಗಳಲ್ಲಿ ವಿಧಾನಸಭಾ ಕ್ಷೇತ್ರ ಸಮಿತಿ, ನಗರ ಸಮಿತಿ, ಬ್ಲಾಕ್ ಹಾಗೂ ಬ್ರಾಂಚ್ ಸಮಿತಿಗಳ ಪದಾಧಿಕಾರಿಗಳು ಮತ್ತು ಅಪಾರ ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದು, ಸಂಭ್ರಮವನ್ನು ಹಂಚಿಕೊಂಡರು.

LEAVE A REPLY

Please enter your comment!
Please enter your name here