ಗಜಾನನ ಶಾಲೆಯಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ ಮಾಹಿತಿ ಕಾರ್ಯಕ್ರಮ

0

ಪುತ್ತೂರು: ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ ಮಾಹಿತಿ ಕಾರ್ಯಕ್ರಮ ಜೂ.22ರಂದು ನಡೆಯಿತು.

ಮಾದಕ ದ್ರವ್ಯಗಳ ವ್ಯಸನಕ್ಕೆ ಬಲಿಯಾಗುವುದರಿಂದ ಆಗುವ ತೊಂದರೆಗಳು, ಅದರ ದುಷ್ಪರಿಣಾಮಗಳು ಹಾಗೂ ವಿದ್ಯಾರ್ಥಿಗಳು ಆಕಸ್ಮಿಕವಾಗಿ ಇಂತಹ ಘಟನೆಗಳನ್ನು ಕಂಡಲ್ಲಿ ಪೊಲೀಸರಿಗೆ ಯಾವ ರೀತಿ ಮಾಹಿತಿ ನೀಡಬೇಕು ಎಂಬ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ವೆಂಕಟಪ್ಪ ಹಾಗೂ ಪ್ರೊಬೇಷನರಿ ಪಿಎಸ್‌ಐ ಅರುಣ್ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಚಿನ್ಮಯ ಪನೆಯಾಲ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಹಮುಖ್ಯೋಪಾಧ್ಯಾಯಿನಿ ಸೌಮ್ಯ ಎ. ಸ್ವಾಗತಿಸಿ, ಶಿಕ್ಷಕ ಪ್ರಶಾಂತ್ ರೈ ವಂದಿಸಿದರು. ಶಿಕ್ಷಕಿ ಅನುಶ್ರೀ ಎಂ.ಬಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here