ಜೂ.26: ದ.ಕ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ, ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಜಂಟಿ ಆಶ್ರಯದಲ್ಲಿ ಉಪ್ಪಿನಂಗಡಿಯಲ್ಲಿ ಸಾಮಾಜಿಕ ಮುಖಂಡರಿಗೆ SIR ಬಗ್ಗೆ ಮಾಹಿತಿ ಕಾರ್ಯಾಗಾರ

0

ಪುತ್ತೂರು: ದ ಕ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಜಂಟಿ ಆಶ್ರಯದಲ್ಲಿ ಸಾಮಾಜಿಕ ಮುಖಂಡರಿಗೆ SIR ಬಗ್ಗೆ ಮಾಹಿತಿ ಕಾರ್ಯಗಾರ ಜೂ.26 ರಂದು ಅಪರಾಹ್ನ ಉಪ್ಪಿನಂಗಡಿ ರೋಟರಿ ಸಮುದಾಯ ಭವನದಲ್ಲಿ ನಡೆಯಲಿದೆ.


ಜಾಗ್ರತ ಕರ್ನಾಟಕ ಸದಸ್ಯ ನಿಸಾರ್ ಅಹಮದ್ ರವರು ಮಾಹಿತಿ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಎಚ್. ಮಹಮ್ಮದ್ ಆಲಿ, ಪುತ್ತೂರು ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ಡಾ| ರಾಜಾರಾಮ್. ಕೆ. ಬಿ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು ಟಿ ತೌಸೀಫ್ ಸಹಿತ ಹಲವಾರು ಮುಖಂಡರುಗಳು ಭಾಗವಹಿಸಲಿರುವರು. ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಮುಖಂಡರುಗಳು, ಕಾಂಗ್ರೆಸ್ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಗಣೇಶ್ ರಾಜ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here