







ಆರ್ಯಪು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಹಂಟ್ಯಾರು ಇಲ್ಲಿನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ)ಯ ತೆರವಾದ ಸ್ಥಾನಕ್ಕೆ ಜೂನ್ 15ರಂದು ಆಯ್ಕೆ ಪ್ರಕ್ರಿಯೆ ನಡೆಯಿತು.ಆರ್ಯಾಪು ಗ್ರಾಮ ಪಂಚಾಯತ್ ಸೂಚನೆಯ ಮೇರೆಗೆ ನಡೆದ ಆಯ್ಕೆಯಲ್ಲಿ ತೆರವಾದ ಸ್ಥಾನಕ್ಕೆ ಉಮೇಶ್ ಮರಿಕೆ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು. ಉಪಾಧ್ಯಕ್ಷರಾಗಿ ಯಶೋಧ ರೈ ಅವರು ಮುಂದುವರಿಯಲಿದ್ದಾರೆ. ಶಾಲಾ ಮುಖ್ಯ ಶಿಕ್ಷಕಿ ಚಂದ್ರಾವತಿ ಕೆ. ಮತ್ತು ಶಿಕ್ಷಕ ವೃಂದದವರು ಆಯ್ಕೆ ಪ್ರಕ್ರಿಯೆಯಲ್ಲಿ ಸಹಕರಿಸಿದರು.












