







ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲಾ ಕಾರ್ಯದರ್ಶಿ ಕೆ.ಸೇಸಪ್ಪ ರೈ ಹಾಗೂ ಪುಷ್ಪಾ ದಂಪತಿಯ ವೈವಾಹಿಕ ಜೀವನದ ಸುವರ್ಣ ಮಹೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲಾ ಸಭಾಂಗಣದಲ್ಲಿ ನಡೆಯಿತು.



ಜು.15ರಂದು ರಾಮಕುಂಜದಲ್ಲಿ ಕಾರ್ಯಕ್ರಮ ನಡೆಯಲಿದ್ದು ಪುತ್ತೂರು ಎಸ್ಆರ್ಕೆ ಲ್ಯಾಡರ್ಸ್ನ ಮಾಲಕರಾದ ಕೇಶವ ಅಮೈ ಅವರು ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ಮಾಹಿತಿ ನೀಡಿದರು. ಆಲಂಕಾರು ವಲಯ ಬಂಟರ ಸಂಘದ ಅಧ್ಯಕ್ಷ ಪ್ರಶಾಂತ್ ರೈ ಮನವಳಿಕೆ, ಕಾರ್ಯದರ್ಶಿ ಲೋಕನಾಥ ರೈ, ಆತೂರು ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೀರಜ್ಕುಮಾರ್ ರೈ, ಚೆನ್ನಕೇಶವ ರೈ ಗುತ್ತುಪಾಲು, ಪ್ರಶಾಂತ ರೈ ಆಲಂಕಾರು, ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲಾ ಆಡಳಿತಾಧಿಕಾರಿ ಆನಂದ ಎಸ್.ಟಿ., ವ್ಯವಸ್ಥಾಪಕ ರಮೇಶ್ ರೈ ರಾಮಮಜಲುಗುತ್ತು, ಮುಖ್ಯಶಿಕ್ಷಕಿ ಗಾಯತ್ರಿ ಯು.ಎನ್., ಶಿಕ್ಷಕಿ ಸರಿತಾ, ಸಿಬಿಎಸ್ಇ ವಿದ್ಯಾಲಯದ ಪ್ರಾಂಶುಪಾಲ ಪ್ರವೀದ್, ಕೆ.ಸೇಸಪ್ಪ ರೈಯವರ ಪುತ್ರಿಯರಾದ ಸುಕೇತಾ ರೈ, ಡಾ.ಸುಪ್ರೀತಾ ರೈ, ಅಳಿಯಂದಿರಾದ ಮುಂಬೈಯ ಉದ್ಯಮಿ ಅಶೋಕ್ ಶೆಟ್ಟಿ, ಉಪ್ಪಿನಂಗಡಿ ಧನ್ವಂತರಿ ಆಸ್ಪತ್ರೆಯ ವೈದ್ಯರಾದ ಡಾ.ನಿರಂಜನ್ ರೈ ಮತ್ತಿತರರು ಉಪಸ್ಥಿತರಿದ್ದರು.












