







ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ನ ಅಧಿಕೃತ ಲೋಗೋ ಬಳಸಿ, ಟ್ರಸ್ಟಿನ ಸಂಚಾಲಕ ಅರುಣ್ ಕುಮಾರ್ ಪುತ್ತಿಲರ ಬಗ್ಗೆ ಸಾಮಾಜಿಕ ಜಾಲತಾಣ (ಫೇಸ್ಬುಕ್) ದಲ್ಲಿ ಸುಳ್ಳು ಮಾಹಿತಿಯನ್ನು ಹಂಚಿರುವ ಕುರಿತು ಇಬ್ಬರು ವ್ಯಕ್ತಿಗಳ ವಿರುದ್ಧ ಟ್ರಸ್ಟ್ನ ಪದಾಧಿಕಾರಿಗಳು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.


ಪುತ್ತಿಲ ಪರಿವಾರ ಸೇವಾ ಟ್ರಸ್ಟ್ನ ಅಧ್ಯಕ್ಷ ಶ್ರೀರಾಮ ಭಟ್, ಸಂಘಟನಾ ಕಾರ್ಯದರ್ಶಿ ಅನಿಲ್ ತೆಂಕಿಲ, ಕೋಶಾಧಿಕಾರಿ ರೂಪೇಶ್ ನಾೖಕ್, ಮಾಜಿ ಅಧ್ಯಕ್ಷ ಮಹೇಂದ್ರ ವರ್ಮ ದೂರು ನೀಡುವ ಸಂದರ್ಭ ಉಪಸ್ಥಿತರಿದ್ದರು.













