ಎಸ್.ಆರ್.ಕೆ.ಲ್ಯಾಡರ‍್ಸ್‌ನ ಮಾಲಕ ಕೇಶವ ಅಮೈ ಅವರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ

0

ಪುತ್ತೂರು: ನಾಡಪ್ರಭು ಕೆಂಪೇಗೌಡ ಪ್ರತಿಷ್ಟಾನದಿಂದ ಕೊಡಮಾಡುವ ’ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿಗೆ’ ಪ್ರತಿಷ್ಠಿತ ಎಸ್.ಆರ್.ಕೆ.ಲ್ಯಾಡರ‍್ಸ್‌ನ ಮಾಲಕ ಕೇಶವ ಅಮೈ ಅವರಿಗೆ ಪ್ರದಾನ ಮಾಡಲಾಗಿದೆ.

ನಾಡಪ್ರಭು ಕೆಂಪೇಗೌಡರ 571 ನೇ ಜನ್ಮದಿನೋತ್ಸವದ ಅಂಗವಾಗಿ ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಹಲವು ಗಣ್ಯರಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಎಸ್.ಆರ್.ಕೆ.ಲ್ಯಾಡರ‍್ಸ್ ಮಾಲಕ ಕೇಶವ ಅಮೈ ಅವರನ್ನು ಸಂಶೋಧನಾ ಕ್ಷೇತ್ರದಲ್ಲಿ ರಾಜ್ಯಪ್ರಶಸ್ತಿಗೆ ಆಯ್ಕೆಗೊಂಡಿದ್ದರು. ಜೂ. 27 ರಂದು ಸಂಜೆ ಬೆಂಗಳೂರಿನ ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಚಿತ್ರದುರ್ಗ ಶ್ರೀ ಮಾದರ ಚೆನ್ನಯ್ಯ ಮಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಭಾರತ ಸರಕಾರದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಸಹಿತ ಹಲವಾರು ಗಣ್ಯರು ಈ ಪ್ರಶಸ್ತಿಯನ್ನು ಎಸ್.ಆರ್.ಕೆ. ಕೇಶವ ಅಮೈ ದಂಪತಿಗೆ ಪ್ರದಾನ ಮಾಡಿದರು.

LEAVE A REPLY

Please enter your comment!
Please enter your name here