ಬಡಗನ್ನೂರು: ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಯಲ್ಲಿ ಉಚಿತ ಯಕ್ಷ ಶಿಕ್ಷಣ ತರಬೇತಿ ಉದ್ಘಾಟನೆ

0

ಬಡಗನ್ನೂರು: “ನಮ್ಮ ಮಣ್ಣಿನ ಕಲೆಯ ಮೂಲಕ ಸಂಸ್ಕೃತಿಯನ್ನು ಬೆಳೆಸಿ, ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹಾಗೂ ಆತ್ಮಸ್ಥೈರ್ಯ ಮೂಡಿಸುವುದೇ ಯಕ್ಷದ್ರುವ ಪಟ್ಲ ಫೌಂಡೇಶನ್‌ನ ಮುಖ್ಯ ಉದ್ದೇಶ. ಮನಸ್ಸಿಗೆ ನೆಮ್ಮದಿ ಕೊಡುವ ಕಲೆ ಯಕ್ಷಗಾನ” ಎಂದು ಯಕ್ಷದ್ರುವ ಯಕ್ಷ ಶಿಕ್ಷಣ ಸಮಿತಿ ಪ್ರಧಾನ ಸಂಚಾಲಕ ವಾಸುದೇವ ಐತಾಳ ಪಣಂಬೂರು ಹೇಳಿದರು.ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಯಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ.) ಮಂಗಳೂರು ಇದರ ಸಹಯೋಗದೊಂದಿಗೆ ಆಯೋಜಿಸಲಾದ ಉಚಿತ ಯಕ್ಷ ಶಿಕ್ಷಣ ತರಬೇತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ತಾನು ಪಡೆದ ಖ್ಯಾತಿಯನ್ನು ಇತರೆ ಕಲಾವಿದರಿಗೆ ಧಾರೆ ಎರೆಯುವುದು ಫೌಂಡೇಶನ್‌ನ ಧ್ಯೇಯ” ಎಂದರು.ಏಕಾಗ್ರತೆಗೆ ಯಕ್ಷಗಾನ ದಾರಿ: ಸಂಸ್ಥೆಯ ನಿರ್ದೇಶಕ ಗಣರಾಜ ಕುಂಬ್ಳೆ ಪ್ರಾಸ್ತಾವಿಕವಾಗಿ ಮಾತನಾಡಿ, “ಯಕ್ಷಗಾನ ಅತ್ಯಂತ ಪ್ರಿಯವಾದ ಕಲೆ. ಪುರಾಣದ ಪರಿಚಯ ಮಾಡಿಕೊಡುವುದರ ಜೊತೆಗೆ ಗ್ರಾಮೀಣ ಭಾಗದ ಮಕ್ಕಳಲ್ಲಿ ಏಕಾಗ್ರತೆ, ಆತ್ಮಸ್ಥೈರ್ಯ ಮೂಡಿಸುತ್ತದೆ” ಎಂದರು.

ವಿದ್ಯಾ ಸಂಸ್ಥೆಯ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಸಭಾಧ್ಯಕ್ಷತೆ ವಹಿಸಿ, “ಯಕ್ಷಗಾನ ಕಲೆ ಸರ್ವಾಂಗೀಣ ಬೆಳವಣಿಗೆಗೆ ಕಾರಣ. ಶಿಕ್ಷಣ ಕೇವಲ ಪಠ್ಯಕ್ಕೆ ಸೀಮಿತವಲ್ಲ. ಯಕ್ಷಗಾನದ ಮೂಲಕ ವಿದ್ಯಾರ್ಥಿಗಳಲ್ಲಿ ಸಂಸ್ಕಾರ, ಶಿಸ್ತು ತಾನಾಗಿಯೇ ಬರುತ್ತದೆ. ಇದರಿಂದ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ” ಎಂದು ಅಭಿಪ್ರಾಯಪಟ್ಟರು.ಕಾರ್ಯಕ್ರಮದಲ್ಲಿ ವಿದ್ಯಾ ಸಂಸ್ಥೆ ಸಂಚಾಲಕ ವಿಘ್ನೇಶ್ ಹಿರಣ್ಯ, ಪುತ್ತೂರು-ಸುಳ್ಯ ಯಕ್ಷದ್ರುವ ಯಕ್ಷ ಶಿಕ್ಷಣ ಸಮಿತಿ ಸಂಚಾಲಕ ಪ್ರಶಾಂತ್ ರೈ ಮುಂಡಾಲ ಗುತ್ತು, ನಾಟ್ಯಗುರು ಚಂದ್ರಶೇಖರ್ ಸುಳ್ಯಪದವು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.ಶಿಕ್ಷಕಿ ಪುಷ್ಪಾವತಿ ಸ್ವಾಗತಿಸಿದರು. ಲತಾ ವಂದಿಸಿದರು. ಶಿಕ್ಷಕಿ ಸ್ವರ್ಣಶ್ರೀ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here