







ವಿಟ್ಲ: ಚಲಿಸುತ್ತಿದ್ದ ಕಾರಿನ ಮೇಲೆ ವಿದ್ಯುತ್ ಕಂಬ ಹಾಗೂ ಮರವೊಂದು ಬಿದ್ದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ದಂಪತಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ವಿಟ್ಲ ಸಮೀಪದ ಪಡಿಬಾಗಿಲು ಸಮೀಪ ಜೂ.29ರಂದು ಬೆಳಗ್ಗೆ ನಡೆದಿದೆ.


ಪಡಿಬಾಗಿಲು ಸಮೀಪ ಮರವೊಂದು ವಿದ್ಯುತ್ ಕಂಬದ ಮೇಲೆ ಬಿದ್ದಿದ್ದು, ಬಳಿಕ ಅವೆರಡು ಕಾರಿನ ಮೇಲೆ ಬಿದ್ದು ಘಟನೆ ಸಂಭವಿಸಿದೆ. ಕಾರು ಕುದ್ದುಪದವು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದು, ಕಾರಿನಲ್ಲಿದ್ದ ದಂಪತಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಘಟನೆಯಿಂದಾಗಿ ಅಲ್ಪ ಹೊತ್ತು ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿದ್ದು, ಸ್ಥಳಕ್ಕಾಗಮಿಸಿ ಪೊಲೀಸರು ಹಾಗೂ ಮೆಸ್ಕಾಂ ಸಿಬ್ಬಂದಿ ಸ್ಥಳೀಯರ ಸಹಕಾರದೊಂದಿಗೆ ಮರ ಮತ್ತು ವಿದ್ಯುತ್ ಕಂಬವನ್ನು ತೆರವುಗೊಳಿಸಿ, ಹೆದ್ದಾರಿಯಲ್ಲಿ ಸಂಚಾರ ಸುಗಮಗೊಳಿಸಿದರು.













