ಜು.1: ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ

0

ಪುತ್ತೂರು: ಪ್ರಗತಿ ಸ್ಪೆಷಾಲಿಟಿ ಹಾಸ್ಪಿಟಲ್,ಪ್ರಗತಿ ಹಾಸ್ಪಿಟಲ್ ಎಜುಕೇಶನ್ ಟ್ರಸ್ಟ್, ಪುತ್ತೂರು ರೋಟರಿ ಮ್ಯಾಮೊಗ್ರಫಿ ಸೆಂಟರ್, ರೋಟರಿ ಕ್ಲಬ್ ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ನಿರಂತರ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವು ಜು.1ರಂದು ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಬೊಳುವಾರು ನಲ್ಲಿರುವ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆಯಲಿದೆ.

ಶಿಬಿರದಲ್ಲಿ ರಕ್ತದೊತ್ತಡ ಪರೀಕ್ಷೆ, ಸಕ್ಕರೆ ಕಾಯಿಲೆ ಪರೀಕ್ಷೆ, ಸ್ಪೆರೋಮೆಟ್ರಿ ಪರೀಕ್ಷೆ, ಇಸಿಜಿ ಪರೀಕ್ಷೆ, ಥೈರಾಯ್ಡ್ ಪರೀಕ್ಷೆ,ಸ್ತನ ಕಾಯಿಲೆ ಪತ್ತೆ ಪರೀಕ್ಷೆ (ಮ್ಯಾಮೋಗ್ರಫಿ), ಮಕ್ಕಳ ತಪಾಸಣಾ ಶಿಬಿರ, ಫೈಬ್ರೋ ಸ್ಕ್ಯಾನ್ ಪರೀಕ್ಷೆ ನಡೆಸಲಾಗುವುದು. ಬಿಪಿಎಲ್ ಕಾರ್ಡ್ ದಾರರಿಗೆ ಸ್ತನ ಕಾಯಿಲೆ ಪತ್ತೆಯ ಪರೀಕ್ಷೆ (ಮ್ಯಾಮೋಗ್ರಫಿ) ಉಚಿತ ಹಾಗೂ ಉಳಿದವರಿಗೆ ರಿಯಾಯಿತಿ ದರದಲ್ಲಿ ಮಾಡಲಾಗುವುದು ಎಂದು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಆಡಳಿತ ನಿರ್ದೇಶಕ ರಾದ ಡಾ. ಯು ಶ್ರೀಪತಿ ರಾವ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here