ಪುತ್ತೂರು ಬಸ್ ನಿಲ್ದಾಣದ ಬಳಿ ಮಾತಿನ ಚಕಮಕಿ, ತಳ್ಳಾಟ : ಯುವತಿಗೆ ಕಿರುಕುಳ ಆರೋಪ

0

ಪುತ್ತೂರು: ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಯುವತಿಗೆ ಕಿರುಕುಳ ನೀಡಿರುವುದಾಗಿ ಆರೋಪಿಸಿ ಮಾತಿನ ಚಕಮಕಿ ಮತ್ತು ತಳ್ಳಾಟ ನಡೆದ ಘಟನೆ ಜು.2ರಂದು ಮಧ್ಯಾಹ್ನ ವರದಿಯಾಗಿದೆ.

ಸ್ಥಳದಲ್ಲಿ ಜಮಾಯಿಸಿದ ಕೆಲವರು ಪರಸ್ಪರ ವಾಗ್ವಾದಕ್ಕಿಳಿದಿದ್ದು, ತಳ್ಳಾಟ ನೂಕಾಟ ನಡೆದ ಬಗ್ಗೆ ವರದಿಯಾಗಿದೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸುವಷ್ಟರಲ್ಲಿ ಎಲ್ಲರೂ ಅಲ್ಲಿಂದ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಗೆ ನಿಖರ ಕಾರಣ ಹಾಗೂ ಇದರಲ್ಲಿ ಭಾಗಿಯಾದವರ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

LEAVE A REPLY

Please enter your comment!
Please enter your name here