







ನೆಲ್ಯಾಡಿ: ಕೌಕ್ರಾಡಿ ಗ್ರಾಮದ ಆಲಂಪಾಡಿ ನಿವಾಸಿ ಸಿವಿಲ್ ಇಂಜಿನಿಯರ್ ಮ್ಯಾಥ್ಯೂ ವಿ.ಎ.(66ವ) ಅವರು ಜು.2ರಂದು ಬೆಳಗ್ಗೆ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.


ಮ್ಯಾಥ್ಯೂ ಅವರು ಪುತ್ತೂರಿನ ಮಾಸ್ಟರ್ ಪ್ಲಾನರಿಯಲ್ಲಿ ಹಲವು ವರ್ಷಗಳ ಕಾಲ ಸಿವಿಲ್ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸಿದ್ದರು.



ಮೃತರು ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ಸೇರಿದಂತೆ ಮೂವರು ಸಹೋದರರು ಹಾಗೂ ನಾಲ್ವರು ಸಹೋದರಿಯರನ್ನು ಅಗಲಿದ್ದಾರೆ.










