ಬಿಳಿನೆಲೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಡಿಜಿ ಪೇ ಸೇವೆಗೆ ಚಾಲನೆ

0

ಪುತ್ತೂರು: ಗ್ರಾಮೀಣ ಭಾಗದ ಜನತೆಗೆ ಬ್ಯಾಂಕಿಂಗ್ ಸೇವೆಗಳನ್ನು ಇನ್ನಷ್ಟು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕಿನ ಬಿಳಿನೆಲೆ ವಲಯದ ಬಂಟ್ರ ನೆಕ್ಕಿಲಾಡಿ ಕಾರ್ಯಕ್ಷೇತ್ರದಲ್ಲಿ ಡಿಜಿ ಪೇ ಸೇವೆಗೆ ಚಾಲನೆ ನೀಡಲಾಯಿತು.

ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ್ ರವರು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಹಾಗೂ ಬ್ಯಾಂಕಿಂಗ್ ಸೇವೆಗಳಿಂದ ವಂಚಿತರಾಗಿರುವ ಪ್ರದೇಶಗಳಲ್ಲಿ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಪರಮ ಪೂಜ್ಯ ಖಾವಂದರ ಮಾರ್ಗದರ್ಶನದಲ್ಲಿ ಪ್ರತಿ ಹಳ್ಳಿ ಹಳ್ಳಿಗಳಲ್ಲಿ ಡಿಜಿ ಪೇ ಸೇವೆಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದ್ದು ಇದರ ಸದುಪಯೋಗವನ್ನು ಜನಸಾಮಾನ್ಯರು ಪಡೆದುಕೊಳ್ಳಬೇಕು ಎಂದರು.


ಬ್ಯಾಂಕ್ ಆಫ್ ಬರೋಡಾ ಮರ್ಧಾಳ ಇಲ್ಲಿಯ ಮ್ಯಾನೇಜರ್ ರಾಮ್ ಅವರು ಡಿಜಿ ಪೇ ಸೇವೆಯನ್ನು ಉದ್ಘಾಟಿಸಿ ಮಾತನಾಡುತ್ತಾ ಡಿಜಿ ಪೇ ಒಂದು ಉತ್ತಮ ಕಾರ್ಯಕ್ರಮವಾಗಿದ್ದು ಬ್ಯಾಂಕಿನ ಸೇವೆಗಳನ್ನು ಧರ್ಮಸ್ಥಳ ಯೋಜನೆಯವರು ಪ್ರತಿ ಹಳ್ಳಿ ಹಳ್ಳಿಗೂ ತಲುಪಿಸಿ ಬ್ಯಾಂಕಿನ ಒತ್ತಡವನ್ನು ಕಡಿಮೆ ಮಾಡುತ್ತಿರುವುದು ಶ್ಲಾಘನೀಯ ಎಂದರು. ಕಡಬ ತಾಲೂಕಿನ ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಒಕ್ಕೂಟದ ಅಧ್ಯಕ್ಷ ಸತೀಶ್ಚಂದ್ರ ವಲಯ ಮೇಲ್ವಿಚಾರಕ ರವಿಪ್ರಸಾದ್, ತಾಲೂಕು ನೋಡೆಲ್ ಅಧಿಕಾರಿ ರಕ್ಷಕ್, ಜಿಲ್ಲಾ ಐಟಿ ಮೆನೇಜರ್ ಶ್ರೇಯಸ್ , ಕೃಷಿ ಮೇಲ್ವಿಚಾರಕರಾದ ಸೋಮೇಶ್ ,ಹಣಕಾಸು ಪ್ರಬಂಧಕರಾದ ಸುಜಾತ , ಭಾರತಿ, ವಲಯದ ಸೇವಾಪ್ರತಿನಿಧಿಗಳು, ಸಂಘದ ಸದಸ್ಯರು ಉಪಸ್ಥಿತರಿದ್ದರು. ಸದಸ್ಯರ ಎ. ಟಿ.ಎಂ ಕಾರ್ಡ್ ಮೂಲಕ ಹಣ ವಿತ್ ಡ್ರಾ ಮಾಡಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

LEAVE A REPLY

Please enter your comment!
Please enter your name here