






ಪುತ್ತೂರು: ಕರ್ನಾಟಕ ರಾಜ್ಯ ಕಿವುಡರ ಕ್ರೀಡಾ ಒಕ್ಕೂಟ (ರಿ) ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಿವುಡರ ಸಂಘ (ರಿ) ಮಂಗಳೂರು ವತಿಯಿಂದ ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.


ಜುಲೈ ತಿಂಗಳ ಚೆಸ್ ಪಂದ್ಯಾವಳಿ ಮೂರು ದಿನಗಳ ಕಾಲ ಬೀದರ್ ಜಿಲ್ಲೆಯ ಹುಮನಾಬಾದ್ನಲ್ಲಿ ನಡೆಯಲಿದೆ.ಸೆಪ್ಟೆಂಬರ್ ತಿಂಗಳ ಕ್ರೀಡಾಕೂಟವು ಮೂರು ದಿನಗಳ ಕಾಲ ಶಿವಮೊಗ್ಗದಲ್ಲಿ ನಡೆಯಲಿದೆ.



ಡಿಸೆಂಬರ್ ತಿಂಗಳಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದು ಕೊಡಗು ಜಿಲ್ಲಾ ಕಿವುಡರ ಸಂಘದ ಉಪಾಧ್ಯಕ್ಷ ಶಂಕರ ನಾರಾಯಣ ಹೆಬ್ಬಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









