






ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣಾ ಸಮಾರಂಭ ನಡೆಯಿತು.
ಸಮಾಜಸೇವಕ, ನಾಟಕ ಕಲಾವಿದ ರವಿ ರಾಮಕುಂಜ ಅವರು ಸಾರ್ವಜನಿಕರಿಂದ ಸಂಗ್ರಹಿಸಿದ ನಿಧಿಯ ಮೂಲಕ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯಶಿಕ್ಷಕ ಸತೀಶ್ ಭಟ್ ಅವರು ವಹಿಸಿದ್ದರು. ರವಿ ರಾಮಕುಂಜ ಅವರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ವಿತರಿಸಿದರು. ವಿಜ್ಞಾನ ಶಿಕ್ಷಕಿ ಉಷಾ ಅವರು ವಿದ್ಯಾರ್ಥಿವೇತನ ಪಡೆಯುವ ವಿದ್ಯಾರ್ಥಿಗಳ ಪಟ್ಟಿಯನ್ನು ವಾಚಿಸಿದರು. ಇದೇ ಸಂದರ್ಭದಲ್ಲಿ ರವಿ ಬೋಳಾರ್ ಅವರ ’ಪ್ರೀತಿ ಉಸಿರು’ ಚಲನಚಿತ್ರದ ಪೋಸ್ಟರ್ ಅನ್ನು ರವಿ ರಾಮಕುಂಜ ಅವರು ಬಿಡುಗಡೆಗೊಳಿಸಿದರು.


ಸಮಾಜ ವಿಜ್ಞಾನ ಶಿಕ್ಷಕರಾದ ದಿನೇಶ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.













